ಪ್ರಧಾನ ಮಂತ್ರಿಯವರ ಕಛೇರಿ
ಸ್ಕೇಟಿಂಗ್‌ನಲ್ಲಿ ಭಾರತದ ಮೊದಲ ವಿಶ್ವ ಚಾಂಪಿಯನ್ ಆಗಿ 2025ರ ಸ್ಪೀಡ್ ಸ್ಕೇಟಿಂಗ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಆನಂದಕುಮಾರ್ ವೇಲ್‌ಕುಮಾರ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
16 SEP 2025 8:45AM by PIB Bengaluru
2025ರ ಸ್ಪೀಡ್ ಸ್ಕೇಟಿಂಗ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಹಿರಿಯ ಪುರುಷರ 1000 ಮೀಟರ್ ಸ್ಪ್ರಿಂಟ್‌ನಲ್ಲಿ ಚಿನ್ನ ಗೆದ್ದ ಆನಂದಕುಮಾರ್ ವೇಲ್‌ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. "ಅವರ ಧೈರ್ಯ, ವೇಗ ಮತ್ತು ಉತ್ಸಾಹ ಅವರನ್ನು ಸ್ಕೇಟಿಂಗ್‌ನಲ್ಲಿ ಭಾರತದ ಮೊದಲ ವಿಶ್ವ ಚಾಂಪಿಯನ್ ಆಗಿ ಮಾಡಿದೆ. ಅವರ ಸಾಧನೆ ಅಸಂಖ್ಯಾತ ಯುವಕರಿಗೆ ಸ್ಫೂರ್ತಿದಾಯಕವಾಗಿದೆ " ಎಂದು ಶ್ರೀ ಮೋದಿ ಅವರು ಆನಂದಕುಮಾರ್ ವೇಲ್‌ಕುಮಾರ್ ಅವರನ್ನು ಪ್ರಶಂಸಿಸಿದ್ದಾರೆ.
ಇಂದು ಎಕ್ಸ್ ನಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಪೋಸ್ಟ್ ಮಾಡಿದ್ದಾರೆ:
"2025ರ ಸ್ಪೀಡ್ ಸ್ಕೇಟಿಂಗ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಹಿರಿಯ ಪುರುಷರ 1000 ಮೀಟರ್ ಸ್ಪ್ರಿಂಟ್‌ನಲ್ಲಿ ಚಿನ್ನ ಗೆದ್ದ ಆನಂದಕುಮಾರ್ ವೇಲ್‌ಕುಮಾರ್ ಬಗ್ಗೆ ಹೆಮ್ಮೆ ಇದೆ. ಅವರ ಧೈರ್ಯ, ವೇಗ ಮತ್ತು ಚೈತನ್ಯ ಅವರನ್ನು ಸ್ಕೇಟಿಂಗ್‌ನಲ್ಲಿ ಭಾರತದ ಮೊದಲ ವಿಶ್ವ ಚಾಂಪಿಯನ್ ಆಗಿ ಮಾಡಿದೆ. ಅವರ ಸಾಧನೆಯು ಅಸಂಖ್ಯಾತ ಯುವಕರಿಗೆ ಸ್ಫೂರ್ತಿ ನೀಡುತ್ತದೆ. ಅವರಿಗೆ ಅಭಿನಂದನೆಗಳು. ಅವರ ಉಜ್ವಲ ಭವಿಷ್ಯಕ್ಕೆ ಶುಭಾಶಯಗಳು".
*****
(ಪ್ರಕಟಣೆ ಐ.ಡಿ.: 2167129)
ವಿಸಿಟರ್ ಕೌಂಟರ್ : 33
ಪ್ರಕಟಣೆಯನ್ನು ಇದರಲ್ಲಿ ಓದಿ:
Marathi
,
Telugu
,
Bengali-TR
,
Malayalam
,
English
,
Urdu
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil