ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಡೆನ್ಮಾರ್ಕ್ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೂರವಾಣಿ ಸಂಭಾಷಣೆ


ಭಾರತ-ಡೆನ್ಮಾರ್ಕ್ ಹಸಿರು ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಬದ್ಧತೆ ನಾಯಕರಿಂದ ಪುನರುಚ್ಚಾರ

ಉಕ್ರೇನ್‌ನಲ್ಲಿನ ಸಂಘರ್ಷದ ಶಾಂತಿಯುತ ಮತ್ತು ಆರಂಭಿಕ ಪರಿಹಾರದ ಕುರಿತು ನಾಯಕರಿಂದ ಅಭಿಪ್ರಾಯ ವಿನಿಮಯ

ಭಾರತ-ಇಯು ಮುಕ್ತ ವ್ಯಾಪಾರ ಒಪ್ಪಂದದ (ಎಫ್‌.ಟಿ.ಎ) ಶೀಘ್ರ ಇತ್ಯರ್ಥಕ್ಕೆ ಪ್ರಧಾನಮಂತ್ರಿ ಫ್ರೆಡೆರಿಕ್ಸೆನ್ ಬೆಂಬಲ

Posted On: 16 SEP 2025 7:41PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆನ್ಮಾರ್ಕ್ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ವ್ಯಾಪಾರ, ಹೂಡಿಕೆ, ನಾವಿನ್ಯತೆ, ಇಂಧನ, ನೀರು ನಿರ್ವಹಣೆ, ಆಹಾರ ಸಂಸ್ಕರಣೆ ಮತ್ತು ಸುಸ್ಥಿರ ಅಭಿವೃದ್ಧಿಯಂತಹ ಕ್ಷೇತ್ರಗಳಲ್ಲಿ ಭಾರತ-ಡೆನ್ಮಾರ್ಕ್ ಹಸಿರು ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಬಲಪಡಿಸುವ ಬದ್ಧತೆಯನ್ನು ಇಬ್ಬರೂ ನಾಯಕರು ಪುನರುಚ್ಚರಿಸಿದರು.

ಡೆನ್ಮಾರ್ಕ್‌ನ ಪ್ರಸ್ತುತದ ಯುರೋಪಿಯನ್ ಒಕ್ಕೂಟದ ಮಂಡಳಿಯ ಅಧ್ಯಕ್ಷತೆಯ ಯಶಸ್ಸಿಗೆ ಮತ್ತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಶಾಶ್ವತವಲ್ಲದ ಸದಸ್ಯತ್ವಕ್ಕಾಗಿ ಪ್ರಧಾನಮಂತ್ರಿ ಮೋದಿ ಅವರು ಶುಭ ಹಾರೈಸಿದರು.

ಪ್ರಾದೇಶಿಕ ಮತ್ತು ಜಾಗತಿಕ ಪ್ರಾಮುಖ್ಯತೆಯ ವಿಷಯಗಳ ಬಗ್ಗೆಯೂ ಉಭಯ ನಾಯಕರು ಚರ್ಚಿಸಿದರು. ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ಹಾಗೂ ಶಾಂತಿ ಮತ್ತು ಸ್ಥಿರತೆಯ ಶೀಘ್ರ ಪುನಃಸ್ಥಾಪನೆಗೆ ಭಾರತದ ಸ್ಥಿರ ಬೆಂಬಲವನ್ನು ಪ್ರಧಾನಮಂತ್ರಿ ಪುನರುಚ್ಚರಿಸಿದರು. 

ಪರಸ್ಪರ ಅನುಕೂಲಕರ ಭಾರತ-ಇಯು ಮುಕ್ತ ವ್ಯಾಪಾರ ಒಪ್ಪಂದ (ಎಫ್.ಟಿ.ಎ) ದ ಶೀಘ್ರ ಇತ್ಯರ್ಥಕ್ಕೆ ಹಾಗೂ 2026 ರಲ್ಲಿ ಭಾರತ ಆಯೋಜಿಸಲಿರುವ ಎ.ಐ. ಇಂಪ್ಯಾಕ್ಟ್ ಶೃಂಗಸಭೆಯ ಯಶಸ್ಸಿಗೆ ಡೆನ್ಮಾರ್ಕ್‌ನ ದೃಢ ಬೆಂಬಲವನ್ನು ಪ್ರಧಾನಮಂತ್ರಿ ಫ್ರೆಡೆರಿಕ್ಸೆನ್ ಪುನರುಚ್ಚರಿಸಿದರು.

 

*****
 


(Release ID: 2167420) Visitor Counter : 2