ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜನ್ಮದಿನದ ಶುಭಾಶಯ ಕೋರಿದ ಅಮೆರಿಕ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ 

Posted On: 16 SEP 2025 11:30PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೂರವಾಣಿ ಕರೆ ಮೂಲಕ 75ನೇ ಜನ್ಮದಿನದ ಶುಭಾಶಯ ಕೋರಿದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. "ನಿಮ್ಮಂತೆಯೇ, ಭಾರತ-ಅಮೆರಿಕ ಸಮಗ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ನಾನು ಸಂಪೂರ್ಣವಾಗಿ ಬದ್ಧನಾಗಿದ್ದೇನೆ. ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ನಿಮ್ಮ ಉಪಕ್ರಮಗಳನ್ನು ನಾವು ಬೆಂಬಲಿಸುತ್ತೇವೆ,’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಈ ಸಂಬಂಧ ಇಂದು ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ:

"ನನ್ನ ಸ್ನೇಹಿತ, ಅಧ್ಯಕ್ಷ ಟ್ರಂಪ್, ನನ್ನ 75ನೇ ಜನ್ಮದಿನದಂದು ನಿಮ್ಮ ದೂರವಾಣಿ ಕರೆ ಮತ್ತು ಆತ್ಮೀಯ ಶುಭಾಶಯಗಳಿಗಾಗಿ ಧನ್ಯವಾದಗಳು. ನಿಮ್ಮಂತೆಯೇ, ಭಾರತ-ಅಮೆರಿಕ ಸಮಗ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ನಾನು ಸಂಪೂರ್ಣವಾಗಿ ಬದ್ಧನಾಗಿದ್ದೇನೆ. ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ನಿಮ್ಮ ಉಪಕ್ರಮಗಳನ್ನು ನಾವು ಬೆಂಬಲಿಸುತ್ತೇವೆ." ಎಂದು ಹೇಳಿದ್ದಾರೆ.

@POTUS

@realDonaldTrump

 

 

*****


(Release ID: 2167502) Visitor Counter : 2