ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ ಅಧ್ಯಕ್ಷರಾದ ಶ್ರೀ ಪುಟಿನ್


ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ಭಾರತದ ಸಂಪೂರ್ಣ ಬೆಂಬಲವನ್ನು ಪ್ರಧಾನಮಂತ್ರಿ ಅವರು ಪುನರುಚ್ಚರಿಸಿದರು

ಈ ವರ್ಷದ ಕೊನೆಯಲ್ಲಿ ಅಧ್ಯಕ್ಷರಾದ ಶ್ರೀ ಪುಟಿನ್ ಅವರನ್ನು ಭಾರತಕ್ಕೆ ಸ್ವಾಗತಿಸಲು ಪ್ರಧಾನಮಂತ್ರಿ ಅವರು ಅವಕಾಶವನ್ನು ಎದುರು ನೋಡುತ್ತಿದ್ದಾರೆ

Posted On: 17 SEP 2025 7:20PM by PIB Bengaluru

ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ  ಮಾತನಾಡಿದರು.

ಪ್ರಧಾನಮಂತ್ರಿ ಅವರ 75ನೇ ಹುಟ್ಟುಹಬ್ಬದಂದು ಅಧ್ಯಕ್ಷರಾದ ಶ್ರೀ ಪುಟಿನ್ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು. ರಷ್ಯಾ ಒಕ್ಕೂಟದ ಅಧ್ಯಕ್ಷರ ಶುಭಾಶಯಗಳು ಮತ್ತು ನಿರಂತರ ಸ್ನೇಹಕ್ಕಾಗಿ ಪ್ರಧಾನಮಂತ್ರಿಯವರು ತಮ್ಮ ಹೃತ್ಪೂರ್ವಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗೆ ಪೂರ್ವಭಾವಿಯಾಗಿ ದ್ವಿಪಕ್ಷೀಯ ಕಾರ್ಯಸೂಚಿಯಲ್ಲಿನ ವಿವಿಧ ವಿಷಯಗಳನ್ನು ಉಭಯ ನಾಯಕರು ಮಾತುಕತೆ ಸಂದರ್ಭದಲ್ಲಿ ಪರಿಶೀಲಿಸಿದರು. ಈ ವರ್ಷದ ಕೊನೆಯಲ್ಲಿ ಅಧ್ಯಕ್ಷರಾದ ಶ್ರೀ ಪುಟಿನ್ ಅವರನ್ನು ಭಾರತಕ್ಕೆ ಸ್ವಾಗತಿಸಲು ಎದುರು ನೋಡುತ್ತಿರುವುದಾಗಿ ಪ್ರಧಾನಮಂತ್ರಿಯವರು ತಿಳಿಸಿದರು.

ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ಭಾರತದ ಸಂಪೂರ್ಣ ಬೆಂಬಲವನ್ನು ಪ್ರಧಾನಮಂತ್ರಿ ಅವರು ಈ ಸಂದರ್ಭದಲ್ಲಿ ಪುನರುಚ್ಚರಿಸಿದರು.

ನಿಕಟ ಸಂಪರ್ಕದಲ್ಲಿರಲು ಉಭಯ ನಾಯಕರು ಪರಸ್ಪರ ಒಪ್ಪಿಕೊಂಡರು.

 

*****
 


(Release ID: 2167870)