ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ ಅಮೆರಿಕ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್
ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರ ಸ್ನೇಹಕ್ಕೆ ಪ್ರಧಾನಮಂತ್ರಿ ಮೆಚ್ಚುಗೆ
ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರ ಉಪಕ್ರಮಗಳಿಗೆ ಭಾರತದ ಬೆಂಬಲವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿ
Posted On:
16 SEP 2025 11:15PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷರಾದ ಘನತೆವೆತ್ತ ಶ್ರೀ ಡೊನಾಲ್ಡ್ ಜೆ. ಟ್ರಂಪ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ತಮ್ಮ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಪ್ರಧಾನಮಂತ್ರಿ ಅವರು ಅಧ್ಯಕ್ಷರಾದ ಟ್ರಂಪ್ ಅವರಿಗೆ ಧನ್ಯವಾದ ಅರ್ಪಿಸಿದರು ಮತ್ತು ಅವರ ಸ್ನೇಹಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಭಾರತ-ಅಮೆರಿಕ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಗಾಢವಾಗಿಸುವ ಬದ್ಧತೆಯನ್ನು ಉಭಯ ನಾಯಕರು ಪುನರುಚ್ಚರಿಸಿದರು.
ಅವರು ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಅಧ್ಯಕ್ಷರಾದ ಟ್ರಂಪ್ ಅವರ ಉಪಕ್ರಮಗಳಿಗೆ ಭಾರತದ ಬೆಂಬಲವನ್ನು ಪ್ರಧಾನಮಂತ್ರಿ ವ್ಯಕ್ತಪಡಿಸಿದರು.
ಬಳಿಕ ಉಭಯ ನಾಯಕರು ಸಂಪರ್ಕದಲ್ಲಿರಲು ಸಮ್ಮತಿಸಿದರು.
*****
(Release ID: 2168010)