ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಮಂತ್ರಿ ಸುಶೀಲಾ ಕರ್ಕಿ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತುಕತೆ


ನೇಪಾಳದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಸಂಭವಿಸಿದ ದುರಂತಮಯ ಸಾವುನೋವುಗಳಿಗೆ ಪ್ರಧಾನಮಂತ್ರಿ ತೀವ್ರ ಸಂತಾಪ

ಪ್ರಧಾನಮಂತ್ರಿ ಅವರು ನೇಪಾಳದಲ್ಲಿ ಶಾಂತಿ, ಸ್ಥಿರತೆ ಮತ್ತು ಪ್ರಗತಿಯ ಪುನಃಸ್ಥಾಪನೆಗೆ ಭಾರತದ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು

Posted On: 18 SEP 2025 1:05PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಮಂತ್ರಿ ಶ್ರೀಮತಿ ಸುಶೀಲಾ ಕರ್ಕಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. 

ಪ್ರಧಾನಮಂತ್ರಿಯಾಗಿ ಕರ್ಕಿ ಅವರ ನೇಮಕಕ್ಕೆ ಪ್ರಧಾನಮಂತ್ರಿ ಅವರು ಅಭಿನಂದನೆ ಸಲ್ಲಿಸಿದರು ಹಾಗೂ ಭಾರತ ಸರ್ಕಾರ ಮತ್ತು ಜನರ ಪರವಾಗಿ ಶುಭಾಶಯಗಳನ್ನು ತಿಳಿಸಿದರು. 

ನೇಪಾಳದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಸಂಭವಿಸಿದ ದುರಂತ ಸಾವುನೋವುಗಳಿಗೆ ಪ್ರಧಾನಮಂತ್ರಿ ಅವರು ತೀವ್ರ ಸಂತಾಪ ಸೂಚಿಸಿದರು.

ಎರಡೂ ದೇಶಗಳ ನಡುವಿನ ವಿಶೇಷ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲು ನಿಕಟವಾಗಿ ಕೆಲಸ ಮಾಡುವುದನ್ನು ಮುಂದುವರಿಸಲು ಭಾರತ ಸಜ್ಜಾಗಿರುವ ಬಗ್ಗೆ ಹಾಗೂ ನೇಪಾಳದ ಜನರ ಪ್ರಗತಿಗಾಗಿ ಶಾಂತಿ ಮತ್ತು ಸ್ಥಿರತೆಯನ್ನು ಪುನಃಸ್ಥಾಪಿಸುವ ಪ್ರಯತ್ನಗಳಲ್ಲಿ ನೇಪಾಳಕ್ಕೆ ಭಾರತದ ಸಂಪೂರ್ಣ ಬೆಂಬಲವನ್ನು ಪ್ರಧಾನಮಂತ್ರಿ ತಿಳಿಸಿದರು.

ಪ್ರಧಾನಮಂತ್ರಿ ಕರ್ಕಿ ಅವರು ನೇಪಾಳಕ್ಕೆ ಭಾರತದ ದೃಢ ಬೆಂಬಲಕ್ಕಾಗಿ ಪ್ರಧಾನಮಂತ್ರಿ ಅವರಿಗೆ ಕೃತಜ್ಞತೆ ಸಲ್ಲಿಸಿದರು ಹಾಗೂ ಎರಡೂ ದೇಶಗಳ ನಡುವಿನ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಪ್ರಧಾನಮಂತ್ರಿ ಅವರ ಇಂಗಿತಕ್ಕೆ ಸಹಮತ ವ್ಯಕ್ತಪಡಿಸಿದರು.

ಮುಂಬರುವ ನೇಪಾಳದ ರಾಷ್ಟ್ರೀಯ ದಿನದ ಅಂಗವಾಗಿ ಪ್ರಧಾನಮಂತ್ರಿ ಮೋದಿ ಅವರು ಶುಭಾಶಯ ಕೋರಿದರು.

ಪರಸ್ಪರ ಸಂಪರ್ಕದಲ್ಲಿರಲು ಉಭಯ ನಾಯಕರು ಸಮ್ಮತಿಸಿದರು.

 

*****

 


(Release ID: 2168028) Visitor Counter : 10