ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ – ಪ್ರಧಾನಮಂತ್ರಿ ಅಭಿನಂದನೆ
Posted On:
20 SEP 2025 7:42PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಶ್ರೀ ಮೋಹನ್ ಲಾಲ್ ಅವರನ್ನು ಅಭಿನಂದಿಸಿದ್ದಾರೆ. ಶ್ರೀ ಮೋಹನ್ ಲಾಲ್ ಅವರು ಶ್ರೇಷ್ಠತೆ ಮತ್ತು ಬಹುಮುಖ ಪ್ರತಿಭೆಯನ್ನು ಪ್ರತಿನಿಧಿಸಿದ್ದಾರೆ ಎಂದು ಶ್ರೀ ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ. "ದಶಕಗಳ ಕಾಲದ ಶ್ರೀಮಂತ ಕಾರ್ಯವೈಖರಿಯೊಂದಿಗೆ, ಅವರು ಮಲಯಾಳಂ ಸಿನಿಮಾ, ರಂಗಭೂಮಿಯ ಮುಂಚೂಣಿ ಬೆಳಕಾಗಿದ್ದಾರೆ ಹಾಗೂ ಕೇರಳದ ಸಂಸ್ಕೃತಿಯ ಬಗ್ಗೆ ಅಪಾರ ಒಲವು ಹೊಂದಿದ್ದಾರೆ. ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಚಲನಚಿತ್ರಗಳಲ್ಲಿಯೂ ಅವರು ಅದ್ಭುತ ಪ್ರದರ್ಶನ ನೀಡಿದ್ದಾರೆ. ವಿವಿಧ ಮಾಧ್ಯಮಗಳಲ್ಲಿ ಅವರ ಸಿನಿಮಾ ಮತ್ತು ರಂಗಭೂಮಿ ಪ್ರತಿಭೆ ನಿಜಕ್ಕೂ ಪ್ರೇರಣಾದಾಯಕವಾಗಿದೆ" ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.
ಶ್ರೀ ಮೋದಿ ಅವರ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
"ಶ್ರೀ ಮೋಹನ್ ಲಾಲ್ ಅವರು ಶ್ರೇಷ್ಠತೆ ಮತ್ತು ಬಹುಮುಖ ಪ್ರತಿಭೆಯ ಸಾಕಾರಮೂರ್ತಿಯಾಗಿದ್ದಾರೆ. ದಶಕಗಳ ಕಾಲದ ಸಮೃದ್ಧ ಕಾರ್ಯವೈಖರಿಯೊಂದಿಗೆ, ಅವರು ಮಲಯಾಳಂ ಸಿನಿಮಾ, ರಂಗಭೂಮಿಯ ಪ್ರಮುಖ ಜ್ಯೋತಿಯಾಗಿ ನಿಂತಿದ್ದಾರೆ ಮತ್ತು ಕೇರಳದ ಸಂಸ್ಕೃತಿಯ ಬಗ್ಗೆ ಅಪಾರ ಒಲವು ಹೊಂದಿದ್ದಾರೆ. ಅವರು ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಚಲನಚಿತ್ರಗಳಲ್ಲಿಯೂ ಅಮೋಘ ಪ್ರದರ್ಶನ ನೀಡಿದ್ದಾರೆ. ವಿವಿಧ ಮಾಧ್ಯಮಗಳಲ್ಲಿನ ಅವರ ಸಿನಿಮಾ ಮತ್ತು ರಂಗಭೂಮಿ ಪ್ರತಿಭೆ ನಿಜಕ್ಕೂ ಪ್ರೇರಣಾದಾಯಕವಾಗಿದೆ.
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಅವರಿಗೆ ಅಭಿನಂದನೆಗಳು. ಅವರ ಸಾಧನೆಗಳು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತಲಿರಲಿ."
@Mohanlal
(Release ID: 2169181)
Read this release in:
English
,
Urdu
,
Marathi
,
Hindi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam