ಪ್ರಧಾನ ಮಂತ್ರಿಯವರ ಕಛೇರಿ
ಉಜ್ವಲ ಕುಟುಂಬಕ್ಕೆ ಸೇರ್ಪಡೆಗೊಂಡ ಎಲ್ಲಾ ತಾಯಂದಿರು ಮತ್ತು ಸಹೋದರಿಯರಿಗೆ ಪ್ರಧಾನಮಂತ್ರಿ ಅವರಿಂದ ಅಭಿನಂದನೆ
Posted On:
22 SEP 2025 3:46PM by PIB Bengaluru
ಉಜ್ವಲ ಕುಟುಂಬಕ್ಕೆ ಸೇರ್ಪಡೆಗೊಳ್ಳುತ್ತಿರುವ ಎಲ್ಲಾ ತಾಯಂದಿರು ಮತ್ತು ಸಹೋದರಿಯರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ. "ನಮ್ಮ ಈ ಹೆಜ್ಜೆಯ ಮೂಲಕ, ಈ ಪವಿತ್ರ ಹಬ್ಬದಂದು ಅವರು ಹೊಸ ಸಂತೋಷವನ್ನು ಅನುಭವಿಸುವುದಲ್ಲದೆ, ಮಹಿಳಾ ಸಬಲೀಕರಣಕ್ಕಾಗಿ ನಮ್ಮ ಬದ್ಧತೆಗಳನ್ನು ಮತ್ತಷ್ಟು ಬಲಗೊಳಿಸಿದ್ದಾರೆ" ಎಂದು ಶ್ರೀ ಮೋದಿಯವರು ಹೇಳಿದ್ದಾರೆ.
ಕೇಂದ್ರ ಸಚಿವರಾದ ಶ್ರೀ ಹರ್ ದೀಪ್ ಸಿಂಗ್ ಪುರಿ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಶ್ರೀ ಮೋದಿಯವರು:
"ನವರಾತ್ರಿಯ ಈ ಶುಭ ಸಂದರ್ಭದಲ್ಲಿ ಉಜ್ವಲ ಕುಟುಂಬಕ್ಕೆ ಸೇರ್ಪಡೆಗೊಳ್ಳುತ್ತಿರುವ ನಮ್ಮ ಎಲ್ಲಾ ತಾಯಂದಿರು ಮತ್ತು ಸಹೋದರಿಯರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು! ನಮ್ಮ ಈ ಹೆಜ್ಜೆಯು ಈ ಪವಿತ್ರ ಹಬ್ಬದಂದು ಅವರಿಗೆ ಹೊಸ ಸಂತೋಷವನ್ನು ತರುವುದಲ್ಲದೆ, ಮಹಿಳಾ ಸಬಲೀಕರಣದ ನಮ್ಮ ಸಂಕಲ್ಪವನ್ನು ದೃಢಪಡಿಸುತ್ತದೆ" ಎಂದು ಟ್ವೀಟ್ ಮಾಡಿದ್ದಾರೆ.
*****
(Release ID: 2169639)
Visitor Counter : 2
Read this release in:
English
,
Urdu
,
Marathi
,
Hindi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam