ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕನ್ನಡದ ಖ್ಯಾತ ಲೇಖಕ ಮತ್ತು ಚಿಂತಕ ಶ್ರೀ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

Posted On: 24 SEP 2025 3:44PM by PIB Bengaluru

ಕನ್ನಡದ ಖ್ಯಾತ ಲೇಖಕ ಮತ್ತು ಚಿಂತಕ ಶ್ರೀ ಎಸ್.ಎಲ್.ಭೈರಪ್ಪ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಅವರನ್ನು ರಾಷ್ಟ್ರದ ಆತ್ಮಸಾಕ್ಷಿಯನ್ನು ಕದಲಿಸಿದ ಮತ್ತು ಭಾರತದ ಆತ್ಮವನ್ನು ಆಳವಾಗಿ ಅಧ್ಯಯನ ಮಾಡಿದ ಒಬ್ಬ ಧೀಮಂತ ವ್ಯಕ್ತಿ ಎಂದು ಬಣ್ಣಿಸಿದ್ದಾರೆ.

ಭಾರತೀಯ ಸಾಹಿತ್ಯಕ್ಕೆ, ವಿಶೇಷವಾಗಿ ಕನ್ನಡ ಸಾಹಿತ್ಯಕ್ಕೆ ಶ್ರೀ ಭೈರಪ್ಪನವರ ಕೊಡುಗೆಗಳು ದೇಶದ ಬೌದ್ಧಿಕ ಮತ್ತು ಸಾಂಸ್ಕೃತಿಕ ವಲಯದಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ. ಇತಿಹಾಸ, ತತ್ವಶಾಸ್ತ್ರ ಮತ್ತು ಸಾಮಾಜಿಕ ಸಮಸ್ಯೆಗಳಲ್ಲಿ ಅವರ ನಿರ್ಭೀತ ತೊಡಗಿಸಿಕೊಳ್ಳುವಿಕೆಯು ತಲೆಮಾರುಗಳಾದ್ಯಂತ ಮತ್ತು ಭೌಗೋಳಿಕ ಪ್ರದೇಶಗಳಾದ್ಯಂತ ಅವರಿಗೆ ಮೆಚ್ಚುಗೆಯನ್ನು ಗಳಿಸಿಕೊಟ್ಟಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮ ʼಎಕ್ಸ್‌ʼ ನಲ್ಲಿ ಅವರು ಈ ಕುರಿತು ಪೋಸ್ಟ್‌ ಮಾಡಿದ್ದಾರೆ:

“ಶ್ರೀ ಎಸ್.ಎಲ್. ಭೈರಪ್ಪ ಅವರ ನಿಧನದೊಂದಿಗೆ, ನಮ್ಮ ಆತ್ಮಸಾಕ್ಷಿಯನ್ನು ಕದಲಿಸಿದ ಮತ್ತು ಭಾರತದ ಆತ್ಮವನ್ನು ಆಳವಾಗಿ ಅಧ್ಯಯನ ಮಾಡಿದ ಒಬ್ಬ ಧೀಮಂತ ವ್ಯಕ್ತಿಯನ್ನು ನಾವು ಕಳೆದುಕೊಂಡಿದ್ದೇವೆ. ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಅವರು ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಅವರ ಬರಹಗಳು ಪೀಳಿಗೆಗಳನ್ನು ಚಿಂತಿಸಲು, ಪ್ರಶ್ನಿಸಲು ಮತ್ತು ಸಮಾಜದೊಂದಿಗೆ ಹೆಚ್ಚು ಆಳವಾಗಿ ತೊಡಗಿಸಿಕೊಳ್ಳಲು ಪ್ರೇರೇಪಿಸಿದವು.

ನಮ್ಮ ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಅವರ ಅಚಲವಾದ ಉತ್ಸಾಹವು ಮುಂದಿನ ದಿನಗಳಲ್ಲೂ ಜನರನ್ನು ಪ್ರೇರೇಪಿಸುತ್ತಲೇ ಇರುತ್ತದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.”

ಶ್ರೀ ಎಸ್.ಎಲ್. ಭೈರಪ್ಪ ಅವರ ನಿಧನದೊಂದಿಗೆ, ನಮ್ಮ ಆತ್ಮಸಾಕ್ಷಿಯನ್ನು ಕದಲಿಸಿದ ಮತ್ತು ಭಾರತದ ಆತ್ಮವನ್ನು ಮುಟ್ಟಿದ ಒಬ್ಬ ಧೀಮಂತ ವ್ಯಕಿತ್ವವನ್ನು ನಾವು ಕಳೆದುಕೊಂಡಿದ್ದೇವೆ. ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಅವರು, ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಅವರ ಬರಹಗಳು ಪೀಳಿಗೆಗಳನ್ನು ಚಿಂತಿಸಲು, ಪ್ರಶ್ನಿಸಲು ಮತ್ತು ಸಮಾಜದೊಂದಿಗೆ ಹೆಚ್ಚು ಆಳವಾಗಿ ತೊಡಗಿಸಿಕೊಳ್ಳಲು ಪ್ರೇರೇಪಿಸಿದವು. ನಮ್ಮ ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಅವರ ಅಚಲವಾದ ಉತ್ಸಾಹವು ಮುಂದಿನ ದಿನಗಳಲ್ಲೂ ಜನರನ್ನು ಪ್ರೇರೇಪಿಸುತ್ತಲೇ ಇರುತ್ತದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.

 

*****


(Release ID: 2170750) Visitor Counter : 11