ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜಕೀಯ ರ‍್ಯಾಲಿಯಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

Posted On: 27 SEP 2025 10:07PM by PIB Bengaluru

ತಮಿಳುನಾಡಿನ ಕರೂರಿನಲ್ಲಿ ಇಂದು ನಡೆದ ರಾಜಕೀಯ ರ‍್ಯಾಲಿಯಲ್ಲಿ ಸಂಭವಿಸಿದ ದುರದೃಷ್ಟಕರ ಘಟನೆಯಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತ ಕುಟುಂಬಗಳೊಂದಿಗೆ ರಾಷ್ಟ್ರವು ಒಗ್ಗಟ್ಟಿನಿಂದ ನಿಲ್ಲುತ್ತದೆ ಎಂದು ಒತ್ತಿ‌ ಹೇಳಿರುವ ಶ್ರೀ ಮೋದಿ ಅವರು, ಅಗತ್ಯ ಬೆಂಬಲ ಮತ್ತು ಸಹಾಯ ಖಾತರಿಪಡಿಸುವ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದರು.

ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್‌ ಗಳಲ್ಲಿ ಹೀಗೆ ಹೇಳಿದ್ದಾರೆ:

"ತಮಿಳುನಾಡಿನ ಕರೂರಿನಲ್ಲಿ ರಾಜಕೀಯ ರ‍್ಯಾಲಿಯ‌ ಸಂದರ್ಭದಲ್ಲಿ ಇಂದು ಸಂಭವಿಸಿದ ದುರದೃಷ್ಟಕರ ಘಟನೆ ತೀವ್ರ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಈ ಸಂಕಷ್ಟದ ಸಮಯದಲ್ಲಿ ಅವರಲ್ಲಿ ಸ್ಥೈರ್ಯ ತುಂಬುವಂತಾಗಲಿ ಎಂದು ಹಾರೈಸುತ್ತಾ, ಗಾಯಗೊಂಡ ಎಲ್ಲರೂ ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ."

“தமிழ்நாட்டின் கரூரில் ஓர் அரசியல் பேரணியின் போது நிகழ்ந்த துயரமான சம்பவம் மிகவும் வருத்தம் அளிக்கிறது. இந்த நிகழ்வில், தங்கள் அன்பிற்குரியவர்களை இழந்தவர்களின் குடும்பத்தினருக்கு எனது இரங்கல்களைத் தெரிவித்துக் கொள்கிறேன். இந்தக் கடினமான காலகட்டத்தில் அவர்கள் மன வலிமையைப் பெற விரும்புகிறேன். காயமடைந்தவர்கள் விரைவில் குணமடைய பிரார்த்தனை செய்கிறேன்.”

 

 

*****

 


(Release ID: 2172337) Visitor Counter : 5