ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗಾಜಾ ಸಂಘರ್ಷದ ಕುರಿತಾಗಿ ಅಧ್ಯಕ್ಷರಾದ ಟ್ರಂಪ್ ಅವರ ಶಾಂತಿ ಉಪಕ್ರಮವನ್ನು ಪ್ರಧಾನಮಂತ್ರಿ ಸ್ವಾಗತಿಸಿದ್ದಾರೆ

Posted On: 30 SEP 2025 9:00AM by PIB Bengaluru

ಗಾಜಾ ಸಂಘರ್ಷವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಧ್ಯಕ್ಷರಾದ ಡೊನಾಲ್ಡ್ ಜೆ. ಟ್ರಂಪ್ ಅವರ ಸಮಗ್ರ ಯೋಜನೆಯ ಘೋಷಣೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದ್ದಾರೆ.

ಈ ಯೋಜನೆಯು ಪ್ಯಾಲೆಸ್ಟೀನಿಯನ್ ಮತ್ತು ಇಸ್ರೇಲಿ ಜನರಿಗೆ ಹಾಗೂ ವಿಶಾಲ ಪಶ್ಚಿಮ ಏಷ್ಯಾ ಪ್ರದೇಶಕ್ಕೆ ದೀರ್ಘಕಾಲೀನ ಮತ್ತು ಸುಸ್ಥಿರ ಶಾಂತಿ, ಭದ್ರತೆ ಮತ್ತು ಅಭಿವೃದ್ಧಿಗೆ ಕಾರ್ಯಸಾಧ್ಯವಾದ ಮಾರ್ಗವನ್ನು ಒದಗಿಸಿದೆ ಎಂದು ಪ್ರಧಾನಮಂತ್ರಿಯವರು ಹೇಳಿದ್ದಾರೆ.

ಈ ಸಂಘರ್ಷವನ್ನು ಕೊನೆಗೊಳಿಸಿ, ಈ ಪ್ರದೇಶದಲ್ಲಿ ಶಾಶ್ವತ ಶಾಂತಿ ಸ್ಥಾಪನೆಗೊಳಿಸಲು ಅಧ್ಯಕ್ಷ ಟ್ರಂಪ್ ಅವರ ಉಪಕ್ರಮವನ್ನು ಬೆಂಬಲಿಸಿ ಎಲ್ಲಾ ಸಂಬಂಧಿತ ಪಕ್ಷಗಳು ಒಟ್ಟಾಗುತ್ತವೆ ಎಂದು ಶ್ರೀ ಮೋದಿಯವರು ಆಶಿಸಿದ್ದಾರೆ.

ಪ್ರಧಾನಮಂತ್ರಿ ಅವರು Xನಲ್ಲಿ ಪೋಸ್ಟ್ ಮಾಡಿ;

“ಗಾಜಾ ಸಂಘರ್ಷವನ್ನು ಕೊನೆಗೊಳಿಸಲು ಅಧ್ಯಕ್ಷರಾದ ಡೊನಾಲ್ಡ್ ಜೆ. ಟ್ರಂಪ್ ಅವರ ಸಮಗ್ರ ಯೋಜನೆಯ ಘೋಷಣೆಯನ್ನು ನಾವು ಸ್ವಾಗತಿಸುತ್ತೇವೆ. ಇದು ಪ್ಯಾಲೆಸ್ಟೀನಿಯನ್ ಮತ್ತು ಇಸ್ರೇಲಿ ಜನರಿಗೆ ಹಾಗೂ ವಿಶಾಲ ಪಶ್ಚಿಮ ಏಷ್ಯಾ ಪ್ರದೇಶಕ್ಕೆ ದೀರ್ಘಾವಧಿಯ ಮತ್ತು ಸುಸ್ಥಿರ ಶಾಂತಿ, ಭದ್ರತೆ ಮತ್ತು ಅಭಿವೃದ್ಧಿಗೆ ಕಾರ್ಯಸಾಧ್ಯವಾದ ಮಾರ್ಗವನ್ನು ಒದಗಿಸುತ್ತದೆ. ಅಧ್ಯಕ್ಷ ಟ್ರಂಪ್ ಅವರ ಈ ಉಪಕ್ರಮದಲ್ಲಿ ಸಂಬಂಧಪಟ್ಟವರೆಲ್ಲರೂ ಒಟ್ಟಾಗಿ ಭಾಗಿಯಾಗಿ ಸಂಘರ್ಷವನ್ನು ಕೊನೆಗೊಳಿಸಿ, ಶಾಂತಿ ನೆಲೆಸುವ ಈ ಪ್ರಯತ್ನವನ್ನು ಬೆಂಬಲಿಸುತ್ತಾರೆ ಎಂದು ನಾವು ಭಾವಿಸುತ್ತೇವೆ.

@realDonaldTrump

@POTUS” 

 

*****


(Release ID: 2173034) Visitor Counter : 5