ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

2023-24ರ ಮೂರನೇ ತ್ರೈಮಾಸಿಕದಲ್ಲಿ ಶೇ. 8.4ರಷ್ಟು ಜಿಡಿಪಿ ಬೆಳವಣಿಗೆಯು ಭಾರತೀಯ ಆರ್ಥಿಕತೆಯ ಶಕ್ತಿ ಮತ್ತು ಅದರ ಸಾಮರ್ಥ್ಯವನ್ನು ಬಿಂಬಿಸುತ್ತದೆ: ಪ್ರಧಾನಮಂತ್ರಿ

Posted On: 29 FEB 2024 8:55PM by PIB Bengaluru

2023-24ರ ಮೂರನೇ ತ್ರೈಮಾಸಿಕದಲ್ಲಿ ಶೇ.8.4ರಷ್ಟು ಜಿಡಿಪಿ ಬೆಳವಣಿಗೆಯು ಭಾರತೀಯ ಆರ್ಥಿಕತೆಯ ಶಕ್ತಿ ಮತ್ತು ಅದರ ಸಾಮರ್ಥ್ಯವನ್ನು ಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. 140 ಕೋಟಿ ಭಾರತೀಯರು ಉತ್ತಮ ಜೀವನವನ್ನು ನಡೆಸಲು ಮತ್ತು ವಿಕಸಿತ ಭಾರತವನ್ನು ರಚಿಸಲು ಸಹಾಯ ಮಾಡುವ ತ್ವರಿತ ಆರ್ಥಿಕ ಬೆಳವಣಿಗೆಯನ್ನು ತರಲು ನಮ್ಮ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಅವರು ಪುನರುಚ್ಚರಿಸಿದರು.

ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ;

"2023-24ರ ಮೂರನೇ ತ್ರೈಮಾಸಿಕದಲ್ಲಿ ಶೇ. 8.4 ರಷ್ಟು ಜಿಡಿಪಿ ಬೆಳವಣಿಗೆಯು ಭಾರತೀಯ ಆರ್ಥಿಕತೆಯ ಶಕ್ತಿ ಮತ್ತು ಅದರ ಸಾಮರ್ಥ್ಯವನ್ನು ತೋರಿಸುತ್ತದೆ. ನಮ್ಮ ಪ್ರಯತ್ನಗಳು ತ್ವರಿತವಾಗಿ ಆರ್ಥಿಕ ಬೆಳವಣಿಗೆಯನ್ನು ತರುವುದನ್ನು ಮುಂದುವರಿಸುತ್ತವೆ. ಇದು 140 ಕೋಟಿ ಭಾರತೀಯರಿಗೆ ಉತ್ತಮ ಜೀವನವನ್ನು ನಡೆಸಲು ಮತ್ತು ವಿಕಸಿತ ಭಾರತವನ್ನು ರಚಿಸಲು ಸಹಾಯ ಮಾಡುತ್ತದೆ!"

 

 

*****

 


(Release ID: 2173062) Visitor Counter : 6