ಸಂಪುಟ
azadi ka amrit mahotsav

ಕೇಂದ್ರ ಸರ್ಕಾರಿ ನೌಕರರಿಗೆ ಶೇಕಡ ಮೂರರಷ್ಟು ಹೆಚ್ಚುವರಿ ತುಟ್ಟಿ ಭತ್ಯೆ ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ ನೀಡಲು ಸಂಪುಟ ಅನುಮೋದನೆ

Posted On: 01 OCT 2025 3:06PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಬೆಲೆ ಏರಿಕೆಯನ್ನು ಸರಿದೂಗಿಸಲು, 2025ರ ಜುಲೈ 1 ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ ತುಟ್ಟಿ ಭತ್ಯೆ (ಡಿ.ಎ.) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿ.ಆರ್.) ಅನ್ನು ಬಿಡುಗಡೆ ಮಾಡಲು ಅನುಮೋದನೆ ನೀಡಿದೆ. ಪ್ರಸ್ತುತದ ತುಟ್ಟಿ ಭತ್ಯೆ/ಪರಿಹಾರ ಮೊತ್ತವು ಮೂಲ ವೇತನ/ಪಿಂಚಣಿಯ ಮೇಲಿರುವ ಶೇಕಡ 55ರಷ್ಟಿದ್ದು ಈಗ ಶೇಕಡ 3 ರಷ್ಟನ್ನು ಹೆಚ್ಚುವರಿಯಾಗಿ ನೀಡಲಾಗುವುದು.

ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರ ಎರಡರ ಹೆಚ್ಚಳದಿಂದಾಗಿ ಬೊಕ್ಕಸದ ಮೇಲೆ ಒಟ್ಟಾರೆಯಾಗಿ ವಾರ್ಷಿಕವಾಗಿ ರೂ.10083.96 ಕೋಟಿ ಹೊರೆ ಬೀಳಲಿದೆ. ಈ ಹೆಚ್ಚಳದಿಂದಾಗಿ ಸುಮಾರು 49.19 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.72 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ.

ಈ ಹೆಚ್ಚಳವು 7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿದ ಸ್ವೀಕೃತ ಸೂತ್ರಕ್ಕೆ ಅನುಗುಣವಾಗಿದೆ.

****


(Release ID: 2173577) Visitor Counter : 118