ಪ್ರಧಾನ ಮಂತ್ರಿಯವರ ಕಛೇರಿ
ಫಿಲಿಪೈನ್ಸ್‌ನಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
01 OCT 2025 3:23PM by PIB Bengaluru
ಫಿಲಿಪೈನ್ಸ್‌ನಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿ ಮತ್ತು ವ್ಯಾಪಕ ಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
"ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ" ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಾರೈಸಿದರು. "ಈ ಕಷ್ಟದ ಸಮಯದಲ್ಲಿ ಭಾರತವು ಫಿಲಿಪೈನ್ಸ್ ನೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ" ಎಂದು ಅವರು ಭರವಸೆಯನ್ನು ದೃಢಪಡಿಸಿದರು.
ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ;
“ಫಿಲಿಪೈನ್ಸ್‌ನಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿ ಮತ್ತು ವ್ಯಾಪಕ ಹಾನಿಯ ಬಗ್ಗೆ ತಿಳಿದು ತೀವ್ರ ದುಃಖವಾಯಿತು. ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ. ಈ ಕಷ್ಟದ ಸಮಯದಲ್ಲಿ ಭಾರತವು ಫಿಲಿಪೈನ್ಸ್ ನೊಂದಿಗೆ ಒಗ್ಗಟ್ಟಿನಿಂದ ನಿಂತಿದೆ.
@bongbongmarcos”
*****
(रिलीज़ आईडी: 2174034)
आगंतुक पटल : 37
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam