ಪ್ರಧಾನ ಮಂತ್ರಿಯವರ ಕಛೇರಿ
ಮಧ್ಯ ಪ್ರದೇಶದ ಖಾಂಡ್ವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
ಪಿ ಎಂ ಎನ್ ಆರ್ ಎಫ್ ನಿಂದ ಪರಿಹಾರ ಘೋಷಣೆ
Posted On:
02 OCT 2025 11:36PM by PIB Bengaluru
ಮಧ್ಯ ಪ್ರದೇಶದ ಖಾಂಡ್ವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ(PMNRF)ಯಿಂದ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ಕಚೇರಿ ಟ್ವೀಟ್ ಮಾಡಿ:
“ಮಧ್ಯ ಪ್ರದೇಶದ ಖಾಂಡ್ವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿರುವುದಕ್ಕೆ ತೀವ್ರ ದುಃಖವಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬದವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.
ಮೃತರ ಸಮೀಪದವರಿಗೆ ಪಿ ಎಂ ಎನ್ ಆರ್ ಎಫ್ ನಿಂದ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಪ್ರಧಾನಮಂತ್ರಿ @narendramodi" ಘೋಷಿಸಿರುವುದಾಗಿ ತಿಳಿಸಲಾಗಿದೆ.
*****
(Release ID: 2174351)
Visitor Counter : 6