ಪ್ರಧಾನ ಮಂತ್ರಿಯವರ ಕಛೇರಿ
ಗಾಜಾದಲ್ಲಿ ಶಾಂತಿ ಸ್ಥಾಪನೆಗಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಾಯಕತ್ವವನ್ನು ಸ್ವಾಗತಿಸಿದ ಪ್ರಧಾನಮಂತ್ರಿ
प्रविष्टि तिथि:
04 OCT 2025 7:58AM by PIB Bengaluru
ಗಾಜಾದಲ್ಲಿ ಶಾಂತಿ ಪ್ರಯತ್ನಗಳು ನಿರ್ಣಾಯಕ ಪ್ರಗತಿ ಸಾಧಿಸುತ್ತಿರುವ ಹಿನ್ನೆಲೆಯಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಾಯಕತ್ವವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದ್ದಾರೆ. ಒತ್ತೆಯಾಳುಗಳ ಬಿಡುಗಡೆಯ ಸೂಚನೆಗಳು ಪ್ರಸ್ತುತ ನಡೆಯುತ್ತಿರುವ ಮಾನವೀಯ ಮತ್ತು ರಾಜತಾಂತ್ರಿಕ ಪ್ರಯತ್ನಗಳಲ್ಲಿ ಮಹತ್ವದ ಹೆಜ್ಜೆಯನ್ನು ಪ್ರತಿನಿಧಿಸುತ್ತವೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.
ಈ ಪ್ರದೇಶದಲ್ಲಿ ಬಾಳಿಕೆ ಬರುವ ಮತ್ತು ನ್ಯಾಯಯುತ ಶಾಂತಿಗೆ ಕೊಡುಗೆ ನೀಡುವ ಎಲ್ಲಾ ಉಪಕ್ರಮಗಳನ್ನು ಬೆಂಬಲಿಸುವ ಬದ್ಧತೆಯಲ್ಲಿ ಭಾರತ ದೃಢವಾಗಿದೆ ಎಂದು ಪ್ರಧಾನಮಂತ್ರಿ ಪುನರುಚ್ಚರಿಸಿದರು.
ಈ ಸಂಬಂಧ ಎಕ್ಸ್ ಖಾತೆಯಲ್ಲಿ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಬರೆದಿದ್ದಾರೆ:
"ಗಾಜಾದಲ್ಲಿ ಶಾಂತಿ ಪ್ರಯತ್ನಗಳು ನಿರ್ಣಾಯಕ ಪ್ರಗತಿ ಸಾಧಿಸುತ್ತಿರುವುದರಿಂದ ಅಧ್ಯಕ್ಷ ಡೊನಾಲ್ಡ ಟ್ರಂಪ್ ಅವರ ನಾಯಕತ್ವವನ್ನು ನಾವು ಸ್ವಾಗತಿಸುತ್ತೇವೆ. ಒತ್ತೆಯಾಳುಗಳ ಬಿಡುಗಡೆಯ ಸೂಚನೆಗಳು ಒಂದು ಮಹತ್ವದ ಹೆಜ್ಜೆಯನ್ನು ಸೂಚಿಸುತ್ತವೆ.
ಬಾಳಿಕೆ ಬರುವ ಮತ್ತು ನ್ಯಾಯಯುತ ಶಾಂತಿಯ ನಿಟ್ಟಿನಲ್ಲಿ ನಡೆಯುವ ಎಲ್ಲ ಪ್ರಯತ್ನಗಳಿಗೆ ಭಾರತ ಬಲವಾಗಿ ಬೆಂಬಲ ನೀಡುವುದನ್ನು ಮುಂದುವರಿಸುತ್ತದೆ,
@realDonaldTrump
@POTUS"
****
(रिलीज़ आईडी: 2174713)
आगंतुक पटल : 28
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali-TR
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam