ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನೇಪಾಳದಲ್ಲಿ ಭಾರಿ ಮಳೆಯಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

Posted On: 05 OCT 2025 4:20PM by PIB Bengaluru

ನೇಪಾಳದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಉಂಟಾದ ಜೀವಹಾನಿ ಮತ್ತು ವ್ಯಾಪಕ ಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ನೇಪಾಳದ ಜನರಿಗೆ ಮತ್ತು ನೇಪಾಳ ಸರ್ಕಾರಕ್ಕೆ ಭಾರತದ ದೃಢವಾದ ಬೆಂಬಲವನ್ನು ಅವರು ಪುನರುಚ್ಚರಿಸಿದರು. ಸ್ನೇಹಪರ ನೆರೆಯ ಮತ್ತು ಬಿಕ್ಕಟ್ಟಿನ ಸಮಯದಲ್ಲಿಮೊದಲ ಪ್ರತಿಸ್ಪಂದಕನಾಗಿ ರಾಷ್ಟ್ರದ ಪಾತ್ರವನ್ನು ಒತ್ತಿಹೇಳುವ ಮೂಲಕ ಅಗತ್ಯವಿರುವ ಎಲ್ಲಾ ಸಹಾಯವನ್ನು ನೀಡುವ ಭಾರತದ ಬದ್ಧತೆಯನ್ನು ಶ್ರೀ ನರೇಂದ್ರ ಮೋದಿ ಅವರು ದೃಢಪಡಿಸಿದರು.

ಈ ಕುರಿತು ಅವರು ಹೀಗೆ ಟ್ವೀಟ್‌ ಮಾಡಿದ್ದಾರೆ:

‘‘ನೇಪಾಳದಲ್ಲಿಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾದ ಜೀವಹಾನಿ ಮತ್ತು ಹಾನಿ ದುಃಖಕರವಾಗಿದೆ. ಈ ಸಂಕಷ್ಟದ ಸಮಯದಲ್ಲಿ ನಾವು ನೇಪಾಳದ ಜನರು ಮತ್ತು ಸರ್ಕಾರದೊಂದಿಗೆ ನಿಲ್ಲುತ್ತೇವೆ. ಸ್ನೇಹಪರ ನೆರೆಹೊರೆಯ ರಾಷ್ಟ್ರವಾಗಿ ಮತ್ತು ಮೊದಲ ಪ್ರತಿಸ್ಪಂದಕನಾಗಿ, ಅಗತ್ಯವಿರುವ ಯಾವುದೇ ಸಹಾಯವನ್ನು ಒದಗಿಸಲು ಭಾರತ ಬದ್ಧವಾಗಿದೆ.’’

****


(Release ID: 2175060) Visitor Counter : 7