ಪ್ರಧಾನ ಮಂತ್ರಿಯವರ ಕಛೇರಿ
ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಹಗ್ರಾಮ ಮೊಹಿಲರಿ ಅವರಿಗೆ ಪ್ರಧಾನಮಂತ್ರಿ ಅವರಿಂದ ಅಭಿನಂದನೆ
प्रविष्टि तिथि:
05 OCT 2025 4:14PM by PIB Bengaluru
ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಹಗ್ರಾಮ ಮೊಹಿಲಾರಿ ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು
ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿಯ (ಬಿ.ಟಿ.ಸಿ.) ಮುಖ್ಯ ಕಾರ್ಯನಿರ್ವಾಹಕ ಸದಸ್ಯರಾಗಿ (ಸಿ.ಇ.ಎಂ.) ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಹಗ್ರಾಮ ಮೊಹಿಲಾರಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೃತ್ಪೂರ್ವಕವಾಗಿ ಅಭಿನಂದಿಸಿದರು. ಪೂಜ್ಯ ಬೋಡೋಫಾ ಉಪೇಂದ್ರನಾಥ ಬ್ರಹ್ಮ ಅವರ ದೃಷ್ಟಿಕೋನ ಈಡೇರುವಂತೆ ಹಂಚಿಕೆಯ ಬದ್ಧತೆಯನ್ನು ಉಲ್ಲೇಖಿಸುವ ಮೂಲಕ, ಬಿ.ಟಿ.ಸಿ ಆಡಳಿತಕ್ಕೆ ಕೇಂದ್ರ ಸರ್ಕಾರ ಮತ್ತು ಅಸ್ಸಾಂ ಸರ್ಕಾರಗಳ ಅಚಲವಾದ ಬೆಂಬಲವನ್ನು ಶ್ರೀ ಮೋದಿ ಪುನರುಚ್ಚರಿಸಿದರು.
ಎಕ್ಸ್ ನ ಫೊಸ್ಟ್ ನಲ್ಲಿ ಶ್ರೀ ಮೋದಿ ಹೀಗೆ ಬರೆದಿದ್ದಾರೆ:
"ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿಯ ಸಿ.ಇ.ಎಂ. ಆಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಹಗ್ರಾಮ ಮೊಹಿಲಾರಿ ಅವರನ್ನು ನಾನು ಅಭಿನಂದಿಸುತ್ತೇನೆ. ಅವರಿಗೆ ಮತ್ತು ಅವರ ತಂಡಕ್ಕೆ ಅವರ ಅಧಿಕಾರಾವಧಿಗೆ ನನ್ನ ಶುಭಾಶಯಗಳು. ಮಹಾನ್ ಬೋಡೋಫಾ ಉಪೇಂದ್ರನಾಥ ಬ್ರಹ್ಮ ಅವರ ದೃಷ್ಟಿಕೋನವನ್ನು ಪೂರೈಸಲು ಮತ್ತು ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ನಾವೆಲ್ಲರೂ ಸಾಮೂಹಿಕವಾಗಿ ಕೆಲಸ ಮಾಡುತ್ತಿರುವಾಗ ಕೇಂದ್ರ ಸರ್ಕಾರ ಮತ್ತು ಅಸ್ಸಾಂ ಸರ್ಕಾರವು ಬಿ.ಟಿ.ಸಿ ಸರ್ಕಾರವನ್ನು ಬೆಂಬಲಿಸುವುದನ್ನು ಮುಂದುವರಿಸುತ್ತದೆ.
@HagramaOnline”
****
(रिलीज़ आईडी: 2175081)
आगंतुक पटल : 28
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam