ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಡಾರ್ಜಿಲಿಂಗ್ ಪ್ರದೇಶದಲ್ಲಿ ಮಳೆ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ  ಪ್ರಧಾನಮಂತ್ರಿ ಅವರಿಂದ ಸಹಾಯ ನೀಡುವ ಭರವಸೆ

Posted On: 05 OCT 2025 4:18PM by PIB Bengaluru

ಭಾರೀ ಮಳೆ ಮತ್ತು ಭೂಕುಸಿತದಿಂದ ತೀವ್ರವಾಗಿ ಹಾನಿಗೊಳಗಾದ ಡಾರ್ಜಿಲಿಂಗ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಪರಿಸ್ಥಿತಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಹಾನಿಗೊಳಗಾದ ಪ್ರದೇಶಗಳಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ಒದಗಿಸುವ ಸರ್ಕಾರದ ಬದ್ಧತೆಯನ್ನು ಶ್ರೀ ಮೋದಿ ಅವರು ಪುನರುಚ್ಚರಿಸಿದರು ಮತ್ತು ನೈಸರ್ಗಿಕ ವಿಕೋಪದ ಪರಿಣಾಮವನ್ನು ತಗ್ಗಿಸಲು ಕೇಂದ್ರ ಮತ್ತು ರಾಜ್ಯ ಸಂಸ್ಥೆಗಳ ನಡುವಿನ ಸಂಘಟಿತ ಪ್ರಯತ್ನಗಳನ್ನು ಒತ್ತಿ ಹೇಳಿದರು.

ಎಕ್ಸ್ ನ ಫೊಸ್ಟ್ ನಲ್ಲಿ ಶ್ರೀ ಮೋದಿ ಹೀಗೆ ಬರೆದಿದ್ದಾರೆ:

"ಭಾರೀ ಮಳೆ ಮತ್ತು ಭೂಕುಸಿತದಿಂದ ಹಾನಿಗೊಳಗಾದ ಡಾರ್ಜಿಲಿಂಗ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಅಧಿಕಾರಿಗಳು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ನನ್ನ ಆಲೋಚನೆಗಳು ಮೃತರ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುವೆ."

"ভারী বৃষ্টি ও ভূমিধসে ক্ষতিগ্রস্ত দার্জিলিং এবং আশপাশের এলাকার পরিস্থিতির উপর প্রশাসন গভীরভাবে নজরদারি চালাচ্ছে। শোকসন্তপ্ত পরিবারগুলোর প্রতি আমার গভীর সমবেদনা রইল। আহতদের দ্রুত সুস্থতা কামনা করছি।"

****


(Release ID: 2175083) Visitor Counter : 6