ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಡಾರ್ಜಿಲಿಂಗ್‌ನಲ್ಲಿ ಸಂಭವಿಸಿದ ಸೇತುವೆ ಅವಘಡದಲ್ಲಿನ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

Posted On: 05 OCT 2025 12:57PM by PIB Bengaluru

ಡಾರ್ಜಿಲಿಂಗ್‌ ನಲ್ಲಿ ಇಂದು ಸಂಭವಿಸಿದ ಸೇತುವೆ ಅವಘಡದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ:

“ಡಾರ್ಜಲಿಂಗ್‌ ನ ಸೇತುವೆ ಅವಘಡದಲ್ಲಿ ಜೀವಹಾನಿ ಸಂಭವಿಸಿರುವುದರಿಂದ ತೀವ್ರ ನೋವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ.

ಭಾರೀ ಮಳೆ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ಡಾರ್ಜಿಲಿಂಗ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಪರಿಸ್ಥಿತಿಯ ಮೇಲೆ ಸೂಕ್ಷ್ಮ ನಿಗಾ ವಹಿಸಲಾಗಿದೆ. ಬಾಧಿತರಿಗೆ ಸಾಧ್ಯವಿರುವ ಎಲ್ಲಾ ನೆರವು ನೀಡಲು ನಾವು ಬದ್ಧರಾಗಿದ್ದೇವೆ.”

“দার্জিলিংয়ে সেতু দুর্ঘটনায় প্রাণহানির ঘটনায় গভীরভাবে মর্মাহত। যাঁরা তাঁদের প্রিয়জনদের হারিয়েছেন, তাঁদের প্রতি গভীর সমবেদনা। আহতরা দ্রুত সুস্থ হয়ে উঠুন—এই কামনা করি। প্রবল বৃষ্টিপাত ও ভূমিধসের প্রেক্ষিতে দার্জিলিং ও আশেপাশের এলাকার পরিস্থিতি নিবিড়ভাবে পর্যবেক্ষণ করা হচ্ছে। ক্ষতিগ্রস্তদের জন্য সমস্ত সম্ভাব্য সহায়তা প্রদান করতে আমরা প্রতিশ্রুতিবদ্ধ।“

****


(Release ID: 2175097) Visitor Counter : 6