ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾರತದ ಮುಖ್ಯ ನ್ಯಾಯಮೂರ್ತಿ, ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲಿನ ದಾಳಿಯನ್ನು ಪ್ರಧಾನಮಂತ್ರಿ ಖಂಡಿಸಿದ್ದಾರೆ.

प्रविष्टि तिथि: 06 OCT 2025 8:45PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಸುಪ್ರೀಂ ಕೋರ್ಟ್ ಆವರಣದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ, ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ನಡೆದ ಹೇಯ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಈ ಘಟನೆಯ ನಂತರ ಶ್ರೀ ಮೋದಿ ಅವರು ನ್ಯಾಯಮೂರ್ತಿ ಗವಾಯಿ ಅವರೊಂದಿಗೆ ಮಾತನಾಡಿ, ಇಂತಹ ಪ್ರತಿಕೂಲ ಪರಿಸ್ಥಿತಿಯಲ್ಲೂ ಅವರು ತೋರಿದ ಶಾಂತಿ ಮತ್ತು ಸಂಯಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಎಕ್ಸ್ (X) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ:

“ಭಾರತದ ಮುಖ್ಯ ನ್ಯಾಯಮೂರ್ತಿ, ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರೊಂದಿಗೆ ಮಾತನಾಡಿದೆ. ಇಂದು ಸುಪ್ರೀಂ ಕೋರ್ಟ್ ಆವರಣದಲ್ಲಿ ಅವರ ಮೇಲೆ ನಡೆದ ದಾಳಿಯು ಪ್ರತಿಯೊಬ್ಬ ಭಾರತೀಯನಿಗೂ ಆಕ್ರೋಶ ತರಿಸಿದೆ. ನಮ್ಮ ಸಮಾಜದಲ್ಲಿ ಇಂತಹ ಹೇಯ ಕೃತ್ಯಗಳಿಗೆ ಜಾಗವಿಲ್ಲ. ಇದು ಸಂಪೂರ್ಣವಾಗಿ ಖಂಡನೀಯ.

ಇಂತಹ ಪರಿಸ್ಥಿತಿಯಲ್ಲೂ ನ್ಯಾಯಮೂರ್ತಿ ಗವಾಯಿ ಅವರು ತೋರಿದ ಸಂಯಮವನ್ನು ನಾನು ಮೆಚ್ಚುತ್ತೇನೆ. ಇದು ನ್ಯಾಯದ ಮೌಲ್ಯಗಳಿಗೆ ಮತ್ತು ನಮ್ಮ ಸಂವಿಧಾನದ ಆಶಯವನ್ನು ಬಲಪಡಿಸುವಲ್ಲಿ ಅವರಿಗಿರುವ ಬದ್ಧತೆಯನ್ನು ಉಲ್ಲೇಖಿಸುತ್ತದೆ.”

 

****


(रिलीज़ आईडी: 2175597) आगंतुक पटल : 60
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Malayalam