ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಷ್ಯಾ ಅಧ್ಯಕ್ಷರಾದ ಪುಟಿನ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂಭಾಷಣೆ; ಪುಟಿನ್ ಅವರ 73ನೇ ಜನುಮ ದಿನಕ್ಕೆ ಶುಭ ಹಾರೈಕೆ


ಭಾರತ-ರಷ್ಯಾ ವಿಶೇಷ ಮತ್ತು ವಿಶಿಷ್ಟ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬದ್ಧತೆ ಉಭಯ ನಾಯಕರಿಂದ ಪುನರುಚ್ಚಾರ

ಅಧ್ಯಕ್ಷರಾದ ಪುಟಿನ್ ಅವರನ್ನು ಭಾರತಕ್ಕೆ ಸ್ವಾಗತಿಸಲು ಎದುರು ನೋಡುತ್ತಿದ್ದೇನೆ - ಪ್ರಧಾನಮಂತ್ರಿ 

प्रविष्टि तिथि: 07 OCT 2025 6:47PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಷ್ಯಾದ ಒಕ್ಕೂಟದ ಅಧ್ಯಕ್ಷರಾದ ಮಾನ್ಯ ಶ್ರೀ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಇಂದು ದೂರವಾಣಿ ಮೂಲಕ ಸಂಭಾಷಣೆ ನಡೆಸಿದರು.

ಅಧ್ಯಕ್ಷರಾದ ಪುಟಿನ್ ಅವರ 73ನೇ ಜನುಮದಿನಕ್ಕೆ ಪ್ರಧಾನಮಂತ್ರಿಯವರು ಶುಭ ಕೋರಿದರು ಹಾಗೂ ಉತ್ತಮ ಆರೋಗ್ಯ ಮತ್ತು ಎಲ್ಲಾ ಪ್ರಯತ್ನಗಳಲ್ಲಿ ಯಶಸ್ಸಿಗೆ ಶುಭ ಹಾರೈಸಿದರು.

ಇಬ್ಬರೂ ನಾಯಕರು ದ್ವಿಪಕ್ಷೀಯ ಕಾರ್ಯಸೂಚಿಯಲ್ಲಿನ ಪ್ರಗತಿ ಪರಾಮರ್ಶೆ ನಡೆಸಿದರು ಹಾಗೂ ಭಾರತ ಮತ್ತು ರಷ್ಯಾ ನಡುವಿನ ವಿಶೇಷ ಮತ್ತು ವಿಶಿಷ್ಟ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ಪುನರುಚ್ಚರಿಸಿದರು.

23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗೆ ಅಧ್ಯಕ್ಷರಾದ ಪುಟಿನ್ ಅವರನ್ನು ಭಾರತಕ್ಕೆ ಸ್ವಾಗತಿಸಲು ಎದುರು ನೋಡುತ್ತಿರುವುದಾಗಿ ಪ್ರಧಾನಮಂತ್ರಿ ತಿಳಿಸಿದರು.

 

*****
 


(रिलीज़ आईडी: 2176154) आगंतुक पटल : 18
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam