ಪ್ರಧಾನ ಮಂತ್ರಿಯವರ ಕಛೇರಿ
ಭಾರತಕ್ಕೆ ಚೊಚ್ಚಲ ಅಧಿಕೃತ ಭೇಟಿ ನೀಡುತ್ತಿರುವ ಬ್ರಿಟನ್ ಪ್ರಧಾನಮಂತ್ರಿ ಘನತೆವೆತ್ತ ಕೀರ್ ಸ್ಟಾರ್ಮರ್ ಅವರನ್ನು ಸ್ವಾಗತಿಸಿದ ಪ್ರಧಾನಮಂತ್ರಿ
प्रविष्टि तिथि:
08 OCT 2025 12:21PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತಕ್ಕೆ ಐತಿಹಾಸಿಕ ಮೊದಲ ಭೇಟಿ ನೀಡುತ್ತಿರುವ ಯುನೈಟೆಡ್ ಕಿಂಗ್ ಡಮ್ ನ ಪ್ರಧಾನಮಂತ್ರಿ ಘನತೆವೆತ್ತ ಕೀರ್ ಸ್ಟಾರ್ಮರ್ ಅವರಿಗೆ ಆತ್ಮೀಯ ಸ್ವಾಗತ ಕೋರಿದ್ದಾರೆ.
ಭಾರತ ಮತ್ತು ಯುನೈಟೆಡ್ ಕಿಂಗ್ ಡಮ್ ನಡುವೆ ಪರಸ್ಪರ ಸಮೃದ್ಧ ಮತ್ತು ಬಲಿಷ್ಠ ಭವಿಷ್ಯದ ಹಂಚಿಕೆಯ ದೃಷ್ಟಿಕೋನವನ್ನು ಮುಂದುವರಿಸಲು ನಾಳೆ ನಡೆಯಲಿರುವ ಸಭೆಯನ್ನು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಶ್ರೀ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;
"ಬ್ರಿಟನ್ ನಿಂದ ಇದುವರೆಗಿನ ಅತಿದೊಡ್ಡ ವಾಣಿಜ್ಯ ನಿಯೋಗದೊಂದಿಗೆ ಭಾರತಕ್ಕೆ ನಿಮ್ಮ ಐತಿಹಾಸಿಕ ಮೊದಲ ಭೇಟಿ ನೀಡುತ್ತಿರುವ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್ ಅವರನ್ನು ಸ್ವಾಗತಿಸುತ್ತೇನೆ. ಬಲಿಷ್ಠ, ಪರಸ್ಪರ ಸಮೃದ್ಧ ಭವಿಷ್ಯದ ನಮ್ಮ ಹಂಚಿಕೆಯ ದೃಷ್ಟಿಕೋನವನ್ನು ಮುನ್ನಡೆಸಲು ನಾಳೆಯ ನಮ್ಮ ಸಭೆಯನ್ನು ಎದುರು ನೋಡುತ್ತಿದ್ದೇನೆ.
@Keir_Starmer"
*****
(रिलीज़ आईडी: 2176345)
आगंतुक पटल : 21
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Bengali-TR
,
Punjabi
,
Gujarati
,
Odia
,
Tamil
,
Telugu
,
Malayalam