ಪ್ರಧಾನ ಮಂತ್ರಿಯವರ ಕಛೇರಿ
ಅಮೆರಿಕ ಅಧ್ಯಕ್ಷರಾದ ಟ್ರಂಪ್ ಅವರ ಶಾಂತಿ ಯೋಜನೆಯ ಮೊದಲ ಹಂತದ ಒಪ್ಪಂದ ಸ್ವಾಗತಿಸಿದ ಪ್ರಧಾನಮಂತ್ರಿ
प्रविष्टि तिथि:
09 OCT 2025 9:55AM by PIB Bengaluru
ಅಮೆರಿಕ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರ ಶಾಂತಿ ಯೋಜನೆಯ ಮೊದಲ ಹಂತದ ಒಪ್ಪಂದವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದ್ದಾರೆ.
ಈ ಬೆಳವಣಿಗೆಯು ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರ ಸದೃಢ ನಾಯಕತ್ವವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. ಒತ್ತೆಯಾಳುಗಳ ಬಿಡುಗಡೆ ಮತ್ತು ಗಾಜಾ ಜನರಿಗೆ ಹೆಚ್ಚಿನ ಮಾನವೀಯ ನೆರವು ನೀಡುವುದರಿಂದ ಅತ್ಯಗತ್ಯವಾದ ಪರಿಹಾರ ದೊರೆಯಲಿದೆ ಮತ್ತು ಇದು ಈ ಪ್ರದೇಶದಲ್ಲಿ ಶಾಶ್ವತ ಶಾಂತಿಗೆ ದಾರಿ ಮಾಡಿಕೊಡಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
"ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಶಾಂತಿ ಯೋಜನೆಯ ಮೊದಲ ಹಂತದ ಒಪ್ಪಂದವನ್ನು ನಾವು ಸ್ವಾಗತಿಸುತ್ತೇವೆ. ಇದು ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರ ಬಲವಾದ ನಾಯಕತ್ವದ ಪ್ರತಿಬಿಂಬವೂ ಆಗಿದೆ.
ಒತ್ತೆಯಾಳುಗಳ ಬಿಡುಗಡೆ ಮತ್ತು ಗಾಜಾದ ಜನರಿಗೆ ಹೆಚ್ಚಿನ ಮಾನವೀಯ ನೆರವು ನೀಡಿದಲ್ಲಿ ಅವರಿಗೆ ಅಗತ್ಯವಿರುವ ನಿರಾಳತೆ ದೊರೆತು, ಇದು ಶಾಶ್ವತ ಶಾಂತಿಗೆ ದಾರಿ ಮಾಡಿಕೊಡಲಿ ಎಂದು ನಾವು ಆಶಿಸುತ್ತೇವೆ.
@potus
@realDonaldTrump
@netanyahu”
*****
(रिलीज़ आईडी: 2176644)
आगंतुक पटल : 20
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam