ಪ್ರಧಾನ ಮಂತ್ರಿಯವರ ಕಛೇರಿ
ಹುಟ್ಟುಹಬ್ಬದ ಶುಭ ಕೋರಿದ ಜಾಗತಿಕ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
Posted On:
17 SEP 2024 10:53PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಹುಟ್ಟುಹಬ್ಬಕ್ಕೆ ಶುಭ ಕೋರಿದ ಎಲ್ಲಾ ಜಾಗತಿಕ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಇಟಲಿಯ ಪ್ರಧಾನಮಂತ್ರಿ ಶ್ರೀ ಜಾರ್ಜಿಯಾ ಮೆಲೋನಿ ಅವರಿಗೆ ನೀಡಿದ ಉತ್ತರದಲ್ಲಿ, ಶ್ರೀ ನರೇಂದ್ರ ಮೋದಿ ಅವರು ಹೀಗೆ ಹೇಳಿದ್ದಾರೆ:
"ನಿಮ್ಮ ಆತ್ಮೀಯ ಶುಭಾಶಯಗಳಿಗಾಗಿ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ @GiorgiaMeloni ಅವರಿಗೆ ಧನ್ಯವಾದಗಳು. ಜಾಗತಿಕ ಒಳಿತಿಗಾಗಿ ಭಾರತ ಮತ್ತು ಇಟಲಿ ಸಹಯೋಗವನ್ನು ಮುಂದುವರಿಸುತ್ತವೆ."
ನೇಪಾಳದ ಪ್ರಧಾನಮಂತ್ರಿ ಕೆ.ಪಿ. ಶರ್ಮಾ ಓಲಿ ಅವರಿಗೆ ನೀಡಿದ ಉತ್ತರದಲ್ಲಿ, ಶ್ರೀ ನರೇಂದ್ರ ಮೋದಿ ಅವರು ಹೀಗೆ ಹೇಳಿದ್ದಾರೆ:
"ಪ್ರಧಾನಮಂತ್ರಿ ಕೆ.ಪಿ.ಶರ್ಮಾ ಓಲಿ @kpsharmaoli, ನಿಮ್ಮ ಆತ್ಮೀಯ ಶುಭಾಶಯಗಳಿಗೆ ಧನ್ಯವಾದಗಳು. ನಮ್ಮ ದ್ವಿಪಕ್ಷೀಯ ಪಾಲುದಾರಿಕೆಯನ್ನು ಮುನ್ನಡೆಸಲು ನಿಮ್ಮೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುವುದನ್ನು ನಾನು ಎದುರು ನೋಡುತ್ತಿದ್ದೇನೆ’’.
ಮಾರಿಷಸ್ ಪ್ರಧಾನಮಂತ್ರಿ ಪ್ರವಿಂದ್ ಜುಗನ್ನಾಥ್ ಅವರಿಗೆ ನೀಡಿದ ಉತ್ತರದಲ್ಲಿ, ಶ್ರೀ ನರೇಂದ್ರ ಮೋದಿ ಅವರು ಹೀಗೆ ಹೇಳಿದ್ದಾರೆ:
" ಪ್ರಧಾನಮಂತ್ರಿ ಕುಮಾರ್ ಜುಗನ್ನಾಥ್ @KumarJugnauth ನಿಮ್ಮ ಪ್ರೀತಿಯ ಶುಭಾಶಯಗಳು ಮತ್ತು ಸಂದೇಶಕ್ಕೆ ನಾನು ಕೃತಜ್ಞನಾಗಿದ್ದೇನೆ. ನಮ್ಮ ಜನರು ಮತ್ತು ಮಾನವೀಯತೆಯ ಉತ್ತಮ ಭವಿಷ್ಯಕ್ಕಾಗಿ ನಮ್ಮ ಪ್ರಯತ್ನಗಳಲ್ಲಿ ಮಾರಿಷಸ್ ನಿಕಟ ಪಾಲುದಾರ."
****
(Release ID: 2177074)
Visitor Counter : 19
Read this release in:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam