ಪ್ರಧಾನ ಮಂತ್ರಿಯವರ ಕಛೇರಿ
ರೈತರ ಕಲ್ಯಾಣಕ್ಕಾಗಿ ಎಲ್ಲಾ ಪ್ರಯತ್ನ ಮಾಡಲಾಗುವುದು ಮತ್ತು ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
प्रविष्टि तिथि:
14 SEP 2024 6:32PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ರೈತರ ಕಲ್ಯಾಣಕ್ಕಾಗಿ ರೈತರ ಆದಾಯ ಮತ್ತು ಗ್ರಾಮೀಣ ಉದ್ಯೋಗಾವಕಾಶಗಳನ್ನು ವೃದ್ಧಿಸುವ ಸರ್ಕಾರದ ಬದ್ಧತೆಯನ್ನು ಬಲವಾಗಿ ಪ್ರತಿಪಾದಿಸಿದ್ದಾರೆ.
ಕೃಷಿ ಆದಾಯ ಮತ್ತು ಗ್ರಾಮೀಣ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಇತ್ತೀಚಿನ ನಿರ್ಧಾರಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿರುವ ಶ್ರೀ ನರೇಂದ್ರ ಮೋದಿ, ಈರುಳ್ಳಿಯ ಮೇಲಿನ ರಫ್ತು ಸುಂಕವನ್ನು ಕಡಿಮೆ ಮಾಡುವುದು ಅಥವಾ ಖಾದ್ಯ ತೈಲಗಳ ಮೇಲಿನ ಆಮದು ಸುಂಕವನ್ನು ಹೆಚ್ಚಿಸುವಂತಹ ನಿರ್ಧಾರಗಳು ನಮ್ಮ ಆಹಾರ ಉತ್ಪಾದಕರಿಗೆ ಹೆಚ್ಚಿನ ಲಾಭವನ್ನು ತಂದುಕೊಡಲಿವೆ ಎಂದು ಹೇಳಿದರು. ಈ ನಿರ್ಧಾರಗಳು ಅವರ ಆದಾಯವನ್ನು ಹೆಚ್ಚಿಸುವ ಜತೆಗೆ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳು ವೃದ್ಧಿಯಾಗಲಿವೆ.
ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.
“ದೇಶದ ಆಹಾರ ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳಲು ಹಗಲಿರುಳು ಶ್ರಮಿಸುವ ನಮ್ಮ ರೈತ ಸಹೋದರ ಸಹೋದರಿಯರನ್ನು ರಕ್ಷಿಸಲು ದೊರಕುವ ಯಾವುದೇ ಅವಕಾಶವನ್ನು ನಾವು ಬಿಟ್ಟುಕೊಡುವುದಿಲ್ಲ. ಈರುಳ್ಳಿಯ ಮೇಲಿನ ರಫ್ತು ಸುಂಕವನ್ನು ತಗ್ಗಿಸುವುದಾಗಲಿ ಅಥವಾ ಖಾದ್ಯ ಎಣ್ಣೆಗಳ ಮೇಲಿನ ಆಮದು ಸುಂಕವನ್ನು ಹೆಚ್ಚಿಸುವಂತಹ ಹಲವು ನಿರ್ಧಾರಗಳು ನಮ್ಮ ಆಹಾರ ಪೂರೈಕೆದಾರರಿಗೆ ಹೆಚ್ಚಿನ ಪ್ರಯೋಜನ ಒದಗಿಸುತ್ತವೆ. ಈ ಕ್ರಮಗಳು ಅವರ ಆದಾಯವನ್ನು ಹೆಚ್ಚಿಸುವುದಲ್ಲದೆ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ’’.
****
(रिलीज़ आईडी: 2177144)
आगंतुक पटल : 23
इस विज्ञप्ति को इन भाषाओं में पढ़ें:
Telugu
,
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Malayalam