ಪ್ರಧಾನ ಮಂತ್ರಿಯವರ ಕಛೇರಿ
ರಾಜಸ್ಥಾನದ ಸಿಕಾರ್ ನಲ್ಲಿ ನಡೆದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
ಪಿ.ಎಂ.ಎನ್.ಆರ್.ಎಫ್ ನಿಂದ ಪರಿಹಾರ ಘೋಷಣೆ
Posted On:
29 OCT 2024 7:32PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಸಿಕಾರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಪ್ರಧಾನಮಂತ್ರಿ ಅವರು ಅವಘಡದಲ್ಲಿ ಮೃತಪಟ್ಟ ಕುಟುಂಬದವರಿಗೆ ಪಿಎಂಎನ್ ಆರ್ ಎಫ್ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರವನ್ನು ಮತ್ತು ಗಾಯಗೊಂಡವರಿಗೆ ತಲಾ 50,000 ಸಾವಿರ ರೂ. ಪರಿಹಾರವನ್ನು ಘೋಷಿಸಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯ ತನ್ನ ಸಾಮಾಜಿಕ ಮಾಧ್ಯಮ ಖಾತೆ ಎಕ್ಸ್ ನಲ್ಲಿ ಹೀಗೆ ಹೇಳಿದೆ:
“ರಾಜಸ್ಥಾನದ ಸಿಕಾರ್‌ನಲ್ಲಿ ನಡೆದ ಬಸ್ ಅಪಘಾತ ಹೃದಯವಿದ್ರಾವಕ. ಮೃತಪಟ್ಟವರ ಕುಟುಂಬಗಳಿಗೆ ನನ್ನ ತೀವ್ರ ಸಂತಾಪಗಳು. ದೇವರು ಅವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ. ಗಾಯಗೊಂಡವರೆಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ನಾನು ಬಯಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ: ಪ್ರಧಾನಿ ನರೇಂದ್ರ ಮೋದಿ @narendramodi
ಅಲ್ಲದೆ, ಪ್ರಧಾನಮಂತ್ರಿ ಅವರು ರಾಜಸ್ಥಾನದ ಸಿಕರ್ ನಲ್ಲಿ ನಡೆದ ಅವಘಡದಲ್ಲಿ ಮೃತಪಟ್ಟ ಕುಟುಂಬದವರಿಗೆ ಪಿಎಂಎನ್ ಆರ್ ಎಫ್ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಗಾಯಗೊಂಡವರಿಗೆ ತಲಾ 50,000 ಸಾವಿರ ರೂ. ಪರಿಹಾರ ನೀಡಲಾಗುವುದು’’
****
(Release ID: 2177151)
Visitor Counter : 12
Read this release in:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam