ಪ್ರಧಾನ ಮಂತ್ರಿಯವರ ಕಛೇರಿ
ಗಾಜಾ ಶಾಂತಿ ಯೋಜನೆಯ ಯಶಸ್ಸಿಗೆ ಪ್ರಧಾನಮಂತ್ರಿ ಅವರು ಅಧ್ಯಕ್ಷರಾದ ಶ್ರೀ ಟ್ರಂಪ್ ಅವರನ್ನು ಅಭಿನಂದಿಸಿದರು
ಪ್ರಕಟಣಾ ದಿನಾಂಕ:
09 OCT 2025 9:17PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷರಾದ ಶ್ರೀ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಐತಿಹಾಸಿಕ ಗಾಜಾ ಶಾಂತಿ ಯೋಜನೆಯ ಯಶಸ್ಸಿಗೆ ಅವರನ್ನು ಅಭಿನಂದಿಸಿದರು.
ತಮ್ಮ ಸಂಭಾಷಣೆಯ ಸಮಯದಲ್ಲಿ, ಇಬ್ಬರು ನಾಯಕರು ಎರಡೂ ದೇಶಗಳ ನಡುವೆ ನಡೆಯುತ್ತಿರುವ ವ್ಯಾಪಾರ ಮಾತುಕತೆಗಳಲ್ಲಿ ಸಾಧಿಸಿದ ಉತ್ತಮ ಪ್ರಗತಿಯನ್ನು ಪರಿಶೀಲಿಸಿದರು. ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮುಂಬರುವ ವಾರಗಳಲ್ಲಿ ನಿಕಟ ಸಂಪರ್ಕದಲ್ಲಿರಲು ಅವರು ಪರಸ್ಪರ ಒಪ್ಪಿಕೊಂಡರು.
ಶ್ರೀ ಮೋದಿ ಅವರು ತಮ್ಮ ಎಕ್ಸ್ ತಾಣದ ಖಾತೆಯಲ್ಲಿ ಈ ರೀತಿ ಹೇಳಿದ್ದಾರೆ;
“ನನ್ನ ಸ್ನೇಹಿತ ಅಧ್ಯಕ್ಷರಾದ ಶ್ರೀ ಟ್ರಂಪ್ ಅವರೊಂದಿಗೆ ಮಾತನಾಡಿದೆ. ಐತಿಹಾಸಿಕ ಗಾಜಾ ಶಾಂತಿ ಯೋಜನೆಯ ಯಶಸ್ಸಿಗೆ ಅವರನ್ನು ಅಭಿನಂದಿಸಿದೆ. ವ್ಯಾಪಾರ ಮಾತುಕತೆಗಳಲ್ಲಿ ಸಾಧಿಸಿದ ಉತ್ತಮ ಪ್ರಗತಿಯನ್ನು ಸಹ ಪರಿಶೀಲಿಸಿದೆವು. ಮುಂಬರುವ ವಾರಗಳಲ್ಲಿ ನಿಕಟ ಸಂಪರ್ಕದಲ್ಲಿರಲು ಒಪ್ಪಿಕೊಂಡೆವು.
@POTUS
@realDonaldTrump”
*****
(ಪ್ರಕಟಣೆ ಐ.ಡಿ.: 2178054)
ವಿಸಿಟರ್ ಕೌಂಟರ್ : 40
ಪ್ರಕಟಣೆಯನ್ನು ಇದರಲ್ಲಿ ಓದಿ:
Malayalam
,
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu