ಪ್ರಧಾನ ಮಂತ್ರಿಯವರ ಕಛೇರಿ
ಭಾರತಕ್ಕಾಗಿ ಅಮೆರಿಕದ ನಿಯೋಜಿತ ರಾಯಭಾರಿ ಶ್ರೀ ಸೆರ್ಗಿಯೊ ಗೋರ್ ಅವರು ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು
Posted On:
11 OCT 2025 10:11PM by PIB Bengaluru
ಭಾರತಕ್ಕಾಗಿ ಅಮೆರಿಕದ ನಿಯೋಜಿತ ರಾಯಭಾರಿ ಶ್ರೀ ಸೆರ್ಗಿಯೊ ಗೋರ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಶ್ರೀ ಗೋರ್ ಅವರ ಅಧಿಕಾರಾವಧಿಯು ಯಶಸ್ವಿಯಾಗಲೇಂದು ಪ್ರಧಾನಮಂತ್ರಿ ಅವರು ಶುಭ ಹಾರೈಸಿದರು ಮತ್ತು ಅವರ ಅಧಿಕಾರಾವಧಿಯು ಭಾರತ-ಯುಎಸ್ ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ತಾಣದ ಸಂದೇಶದಲ್ಲಿ ಹೀಗೆ ಹೇಳಿದ್ದಾರೆ;
“ಭಾರತಕ್ಕೆ ಅಮೆರಿಕದ ನಿಯೋಜಿತ ರಾಯಭಾರಿ ಶ್ರೀ ಸೆರ್ಗಿಯೊ ಗೋರ್ ಅವರನ್ನು ಸ್ವಾಗತಿಸಲು ಸಂತೋಷವಾಗಿದೆ. ಅವರ ಅಧಿಕಾರಾವಧಿಯು ಭಾರತ-ಯುಎಸ್ ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ನನಗೆ ವಿಶ್ವಾಸವಿದೆ.
@SergioGor”
*****
(Release ID: 2178090)
Visitor Counter : 6
Read this release in:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam