ಪ್ರಧಾನ ಮಂತ್ರಿಯವರ ಕಛೇರಿ
ಸುರಿನಾಮ್ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
Posted On:
21 NOV 2024 10:57PM by PIB Bengaluru
ನವೆಂಬರ್ 20 ರಂದು ಗಯಾನಾದ ಜಾರ್ಜ್‌ಟೌನ್‌ನಲ್ಲಿ ನಡೆದ 2 ನೇ ಭಾರತ-ಕ್ಯಾರಿಕೊಮ್ ಶೃಂಗಸಭೆಯ ಹೊರಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸುರಿನಾಮ್ ಅಧ್ಯಕ್ಷರಾದ ಶ್ರೀ ಚಂದ್ರಿಕಾ ಪ್ರಸಾದ್ ಸಂತೋಖಿ ಅವರನ್ನು ಭೇಟಿಯಾದರು.
ಉಭಯ ನಾಯಕರು ಈಗ ನಡೆಯುತ್ತಿರುವ ದ್ವಿಪಕ್ಷೀಯ ಉಪಕ್ರಮಗಳ ಪ್ರಗತಿಯನ್ನು ಪರಿಶೀಲಿಸಿದರು. ರಕ್ಷಣೆ ಮತ್ತು ಭದ್ರತೆ, ವ್ಯಾಪಾರ ಮತ್ತು ವಾಣಿಜ್ಯ, ಕೃಷಿ, ಡಿಜಿಟಲ್ ಉಪಕ್ರಮಗಳು ಮತ್ತು ಯು.ಪಿ.ಐ, ಐ.ಸಿ.ಟಿ, ಆರೋಗ್ಯ ರಕ್ಷಣೆ ಮತ್ತು ಔಷಧೀಯ ವಸ್ತುಗಳು, ಸಾಮರ್ಥ್ಯ ವೃದ್ಧಿ, ಸಂಸ್ಕೃತಿ ಮತ್ತು ಜನರ ನಡುವಿನ ಸಂಬಂಧಗಳಂತಹ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಒಪ್ಪಿಕೊಂಡರು. ಸುರಿನಾಮ್‌ಗೆ ಅಭಿವೃದ್ಧಿ ಸಹಕಾರಕ್ಕಾಗಿ, ವಿಶೇಷವಾಗಿ ಸಮುದಾಯ ಅಭಿವೃದ್ಧಿ ಯೋಜನೆಗಳು, ಆಹಾರ ಭದ್ರತಾ ಉಪಕ್ರಮಗಳು, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಭಾರತದ ನಿರಂತರ ಬೆಂಬಲಕ್ಕಾಗಿ ಅಧ್ಯಕ್ಷರಾದ ಸಂತೋಖಿ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಬಗ್ಗೆಯೂ ಉಭಯ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಭಾರತದ ಸದಸ್ಯತ್ವಕ್ಕೆ ಸುರಿನಾಮ್ ನೀಡಿದ ಬೆಂಬಲಕ್ಕಾಗಿ ಪ್ರಧಾನಮಂತ್ರಿ ಮೋದಿ ಅಧ್ಯಕ್ಷರಾದ ಸಂತೋಖಿಗೆ ಧನ್ಯವಾದ ಅರ್ಪಿಸಿದರು.
****
(Release ID: 2178340)
Visitor Counter : 11
Read this release in:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam