ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಒತ್ತೆಯಾಳುಗಳ ಬಿಡುಗಡೆಯನ್ನು ಪ್ರಧಾನಮಂತ್ರಿ ಅವರು ಸ್ವಾಗತಿಸಿ, ಆ ಪ್ರದೇಶದಲ್ಲಿ ಶಾಂತಿ ಸ್ಥಾಪಿಸಲು ಅಧ್ಯಕ್ಷ ಟ್ರಂಪ್ ಅವರ ಪ್ರಾಮಾಣಿಕ ಪ್ರಯತ್ನಗಳನ್ನು ಸ್ವಾಗತಿಸಿದ್ದಾರೆ

प्रविष्टि तिथि: 13 OCT 2025 7:19PM by PIB Bengaluru

ಎರಡು ವರ್ಷಗಳಿಗೂ ಹೆಚ್ಚು ಕಾಲ ಸೆರೆಯಲ್ಲಿದ್ದ ಎಲ್ಲಾ ಒತ್ತೆಯಾಳುಗಳ ಬಿಡುಗಡೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದ್ದಾರೆ. ಒತ್ತೆಯಾಳುಗಳ ಬಿಡುಗಡೆಯು ಅವರ ಕುಟುಂಬಸ್ಥರ ಧೈರ್ಯ ಹಾಗೂ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಶಾಂತಿ ಪ್ರಯತ್ನಗಳು ಮತ್ತು ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರ ದೃಢಸಂಕಲ್ಪದ ಗೌರವವಾಗಿದೆ ಎಂದು ಅವರು ಹೇಳಿದ್ದಾರೆ.

ಈ ಪ್ರದೇಶದಲ್ಲಿ ಅಧ್ಯಕ್ಷ ಟ್ರಂಪ್ ಅವರ ಶಾಂತಿಸ್ಥಾಪನೆಯ ಪ್ರಾಮಾಣಿಕ ಪ್ರಯತ್ನಗಳಿಗೆ ಶ್ರೀ ಮೋದಿ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಶ್ರೀ ಮೋದಿ ಅವರು ಎಕ್ಸ್‌ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“ಎರಡು ವರ್ಷಗಳಿಗೂ ಹೆಚ್ಚು ಕಾಲ ಸೆರೆಯಲ್ಲಿದ್ದ ಎಲ್ಲಾ ಒತ್ತೆಯಾಳುಗಳ ಬಿಡುಗಡೆಯನ್ನು ನಾವು ಸ್ವಾಗತಿಸುತ್ತೇವೆ. ಒತ್ತೆಯಾಳುಗಳ ಸ್ವಾತಂತ್ರ್ಯವು ಅವರ ಕುಟುಂಬಸ್ಥರ ಧೈರ್ಯ ಹಾಗೂ ಅಧ್ಯಕ್ಷ ಟ್ರಂಪ್ ಅವರ ಅಚಲ ಶಾಂತಿ ಪ್ರಯತ್ನಗಳು ಮತ್ತು ಪ್ರಧಾನಮಂತ್ರಿ ನೆತನ್ಯಾಹು ಅವರ ಬಲವಾದ ಸಂಕಲ್ಪಕ್ಕೆ ಗೌರವವಾಗಿದೆ. ಈ ಪ್ರದೇಶದಲ್ಲಿ ಶಾಂತಿ ನೆಲೆಸಲು ಅಧ್ಯಕ್ಷ ಟ್ರಂಪ್ ಅವರ ಪ್ರಾಮಾಣಿಕ ಪ್ರಯತ್ನಗಳನ್ನು ನಾವು ಬೆಂಬಲಿಸುತ್ತೇವೆ.
@POTUS
@realDonaldTrump
@netanyahu”

****


(रिलीज़ आईडी: 2178737) आगंतुक पटल : 20
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam