ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಪಿಎಂಎನ್‌ಆರ್‌ಎಫ್‌ನಿಂದ ಪರಿಹಾರ ಘೋಷಣೆ

Posted On: 14 OCT 2025 10:50PM by PIB Bengaluru

ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ಮೋದಿ ಅವರು ಹಾರೈಸಿದ್ದಾರೆ.

ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಪಿ ಎಂ ಎನ್ ಆರ್ ಎಫ್) ಯಿಂದ ಮೃತರ ವಾರಸುದಾರರಿಗೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಪ್ರಧಾನಮಂತ್ರಿ ಘೋಷಿಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್‌‌ ನಲ್ಲಿ ಹೀಗೆ ಪೋಸ್ಟ್ ಮಾಡಿದೆ: 

"ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿನ ಜೀವಹಾನಿಯಿಂದ ದುಃಖವಾಗಿದೆ. ಈ ಸಂಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಗಳಿಗೆ ನನ್ನ ಸಾಂತ್ವನಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.

ಮೃತರ ವಾರಸುದಾರರಿಗೆ ಪಿ ಎಂ ಎನ್ ಆರ್ ಎಫ್ ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ತಲಾ 50,000 ರೂ. ನೀಡಲಾಗುವುದು: ಪ್ರಧಾನಮಂತ್ರಿ"

@narendramodi

 

 

*****


(Release ID: 2179355) Visitor Counter : 8