ಕೃಷಿ ಸಚಿವಾಲಯ
‘ದ್ವಿದಳ ಧಾನ್ಯಗಳಲ್ಲಿ ಸ್ವಾವಲಂಬನೆ ಮಿಷನ್’ ಮತ್ತು ‘ಪ್ರಧಾನಮಂತ್ರಿ ಧನ-ಧಾನ್ಯ ಕೃಷಿ ಯೋಜನೆ’ಗಳನ್ನು ಸಕಾಲದಲ್ಲಿ ಅನುಷ್ಠಾನಗೊಳಿಸಲು ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ನಿರ್ದೇಶನ
‘ಪ್ರಧಾನಮಂತ್ರಿ ಧನ-ಧಾನ್ಯ ಕೃಷಿ ಯೋಜನೆ’ಯ ತ್ವರಿತ ಅನುಷ್ಠಾನಕ್ಕಾಗಿ 11 ಸಚಿವಾಲಯಗಳ ಸಚಿವರೊಂದಿಗೆ ಸಭೆ ನಡೆಸಲಿರುವ ಶ್ರೀ ಶಿವರಾಜ್ ಸಿಂಗ್
ಕಾಲಮಿತಿಯಲ್ಲಿ ‘ದ್ವಿದಳ ಧಾನ್ಯಗಳಲ್ಲಿ ಸ್ವಾವಲಂಬನೆ ಮಿಷನ್’ ನ ಅನುಷ್ಠಾನಕ್ಕಾಗಿ ಸಂಬಂಧಪಟ್ಟ ರಾಜ್ಯಗಳೊಂದಿಗೆ ಸಭೆಗಳನ್ನು ಆಯೋಜಿಸಲು ಶ್ರೀ ಚೌಹಾಣ್ ಅಧಿಕಾರಿಗಳಿಗೆ ಸೂಚನೆ
Posted On:
17 OCT 2025 11:12AM by PIB Bengaluru
ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ’ದ್ವಿದಳ ಧಾನ್ಯಗಳಲ್ಲಿ ಸ್ವಾವಲಂಬನೆ ಮಿಷನ್’ ಮತ್ತು ‘ಪ್ರಧಾನಮಂತ್ರಿ ಧನ-ಧಾನ್ಯ ಕೃಷಿ ಯೋಜನೆ’ ಕುರಿತು ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ಕೇಂದ್ರ ಸಚಿವರು,ನಿರ್ದಿಷ್ಟ ಕಾಲಮಿತಿಯಲ್ಲಿ ಯೋಜನೆಗಳ ಅನುಷ್ಠಾನಕ್ಕೆ ನಿರ್ದೇಶನಗಳನ್ನು ನೀಡಿದರು. ’ಪ್ರಧಾನಮಂತ್ರಿ ಧನ-ಧಾನ್ಯ ಕೃಷಿ ಯೋಜನೆ’ಯನ್ನು ಶೀಘ್ರ ಜಾರಿಗೊಳಿಸುವುದನ್ನು ಖಾತ್ರಿಪಡಿಸಿಕೊಳ್ಳಲು ಶ್ರೀ ಚೌಹಾಣ್ ಶೀಘ್ರದಲ್ಲೇ 11 ಸಚಿವಾಲಯಗಳ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ.

ಜಿಲ್ಲಾ ಮಟ್ಟದ ಕ್ಲಸ್ಟರ್‌ಗಳನ್ನು ರಚಿಸುವ ಮೂಲಕ ’ದ್ವಿದಳ ಧಾನ್ಯಗಳಲ್ಲಿ ಸ್ವಾವಲಂಬನೆ ಮಿಷನ್’ ಅನ್ನು ಜಾರಿಗೆ ತರಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಯಿತು. ಈ ಕ್ಲಸ್ಟರ್‌ಗಳ ರಚನೆಗೆ ರಾಜ್ಯಗಳಿಂದ ಎಲ್ಲಾ ರೀತಿಯ ಬೆಂಬಲವನ್ನು ಪಡೆಯಲಾಗುತ್ತಿದೆ. ಹೆಚ್ಚುವರಿಯಾಗಿ, ’ಪ್ರಧಾನ ಮಂತ್ರಿ ಧನ-ಧಾನ್ಯ ಕೃಷಿ ಯೋಜನೆ’ ಯನ್ನು ತಳಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಶ್ರೀ ಚೌಹಾಣ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಎರಡೂ ಉಪಕ್ರಮಗಳನ್ನು ತಳಮಟ್ಟದಲ್ಲಿ ಸಕಾಲದಲ್ಲಿ ಜಾರಿಗೊಳಿಸುವುದರಿಂದ ರೈತರಿಗೆ ನೇರ ಪ್ರಯೋಜನವಾಗುತ್ತದೆ ಎಂದು ಅವರು ಹೇಳಿದರು.
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಚಾಲನೆ ನೀಡಿರುವ 'ಪ್ರಧಾನಮಂತ್ರಿ ಧನ-ಧಾನ್ಯ ಕೃಷಿ ಯೋಜನೆ'ಯು ದೇಶಾದ್ಯಂತ 100 ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ 11 ಸಚಿವಾಲಯಗಳ 36 ಉಪ ಯೋಜನೆಗಳನ್ನು ಸಂಯೋಜಿಸುವ ಮೂಲಕ ಕೃಷಿ ಪ್ರಗತಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಈ ಸಂದರ್ಭದಲ್ಲಿ, ಯೋಜನೆಯ ಗರಿಷ್ಠ ಪ್ರಯೋಜನಗಳು ರೈತರಿಗೆ ತಲುಪುವುದನ್ನು ಖಾತ್ರಿಪಡಿಸಿಕೊಳ್ಳಲು ಈ 11 ಸಚಿವಾಲಯಗಳ ಸಚಿವರು ಮತ್ತು ಕಾರ್ಯದರ್ಶಿಗಳು ಮತ್ತು ನೀತಿ ಆಯೋಗದ ಅಧಿಕಾರಿಗಳೊಂದಿಗೆ ಸಭೆಯನ್ನು ಆಯೋಜಿಸುವಂತೆ ಶ್ರೀ ಚೌಹಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಲ್ಲದೆ, ಕೇಂದ್ರ ಕೃಷಿ ಸಚಿವರು ‘ದ್ವಿದಳ ಧಾನ್ಯಗಳಲ್ಲಿ ಸ್ವಾವಲಂಬನೆ ಮಿಷನ್' ಯಶಸ್ವಿಯಾಗಿ ಮತ್ತು ಸಕಾಲದಲ್ಲಿ ಜಾರಿಯನ್ನು ಖಾತ್ರಿಪಡಿಸಿಕೊಳ್ಳಲು ಸಂಬಂಧಿಸಿದ ರಾಜ್ಯಗಳ ನೋಡಲ್ ಅಧಿಕಾರಿಗಳೊಂದಿಗೆ ಸಭೆ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇದಕ್ಕೂ ಮುನ್ನ 2025ರ ಅಕ್ಟೋಬರ್ 11ರಂದು, ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಪುಸಾದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ 'ಪ್ರಧಾನ ಮಂತ್ರಿ ಧನ-ಧಾನ್ಯ ಕೃಷಿ ಯೋಜನೆ' ಮತ್ತು 'ದ್ವಿದಳ ಧಾನ್ಯಗಳಲ್ಲಿ ಸ್ವಾವಲಂಬನೆ ಮಿಷನ್'ಗೆ ಚಾಲನೆ ನೀಡಿದ್ದರು.
ಕೇಂದ್ರ ಸಚಿವ ಸಂಪುಟವು 2025ರ ಜುಲೈ 16 ರಂದು 'ಪ್ರಧಾನಮಂತ್ರಿ ಧನ-ಧಾನ್ಯ ಕೃಷಿ ಯೋಜನೆ'ಗೆ ಅನುಮೋದನೆ ನೀಡಿತ್ತು. ಈ ಯೋಜನೆಯನ್ನು 2025–26ನೇ ಹಣಕಾಸು ವರ್ಷದಿಂದ ಆರಂಭಿಸಿ ಆರು ವರ್ಷಗಳ ಅವಧಿಯಲ್ಲಿ ಜಾರಿಗೊಳಿಸಲಾಗುವುದು. ವಾರ್ಷಿಕ 24,000 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತದೆ. ಅದೇ ರೀತಿ, 'ದ್ವಿದಳ ಧಾನ್ಯಗಳಲ್ಲಿ ಸ್ವಾವಲಂಬನೆ ಮಿಷನ್' ಅನ್ನು ಆರು ವರ್ಷಗಳ ಅವಧಿಯಲ್ಲಿ 11,440 ಕೋಟಿ ರೂಪಾಯಿ ವೆಚ್ಚದಲ್ಲಿ ಜಾರಿಗೊಳಿಸಲಾಗುತ್ತಿದೆ. 2030–31ರ ವೇಳೆಗೆ ದ್ವಿದಳ ಧಾನ್ಯಗಳ ಪ್ರದೇಶವನ್ನು 275 ಲಕ್ಷ ಹೆಕ್ಟೇರ್‌ನಿಂದ 310 ಲಕ್ಷ ಹೆಕ್ಟೇರ್‌ಗೆ, ಉತ್ಪಾದನೆಯನ್ನು 242 ಲಕ್ಷ ಟನ್‌ಗಳಿಂದ 350 ಲಕ್ಷ ಟನ್‌ಗಳಿಗೆ ಮತ್ತು ಉತ್ಪಾದಕತೆಯನ್ನು ಪ್ರತಿ ಹೆಕ್ಟೇರ್‌ಗೆ 1,130 ಕೆಜಿಗೆ ಹೆಚ್ಚಿಸುವ ಗುರಿಯನ್ನು ಈ ಮಿಷನ್ ಹೊಂದಿದೆ. ಸುಧಾರಿತ ಉತ್ಪಾದಕತೆಯ ಜೊತೆಗೆ, ಈ ಮಿಷನ್ ಗಣನೀಯ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಸಾಧ್ಯತೆ ಇದೆ.
*****
(Release ID: 2180276)
Visitor Counter : 13