ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀಲಂಕಾದ ಪ್ರಧಾನಮಂತ್ರಿ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು


ಶ್ರೀಲಂಕಾದ ಪ್ರಧಾನಮಂತ್ರಿ ಅವರು  ಭೇಟಿಯು ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ಆವೇಗವನ್ನು ನೀಡುತ್ತದೆ ಎಂದು ಪ್ರಧಾನಮಂತ್ರಿ ಮೋದಿ ಅವರು ಹೇಳಿದ್ದಾರೆ

ಈ ವರ್ಷದ ಏಪ್ರಿಲ್ ನಲ್ಲಿ ತಾನು ಶ್ರೀಲಂಕಾಕ್ಕೆ ನೀಡಿದ ದೇಶದ ಅಧಿಕೃತ ಭೇಟಿ ಮತ್ತು ಶ್ರೀಲಂಕಾದ ಅಧ್ಯಕ್ಷರಾದ ಶ್ರೀ ದಿಸಾನಾಯಕ ಅವರೊಂದಿಗಿನ ತಮ್ಮ ಫಲಪ್ರದ ಚರ್ಚೆಗಳನ್ನು ಪ್ರಧಾನಮಂತ್ರಿ ಮೋದಿ ಅವರು ಈ ಸಂರ್ಭದಲ್ಲಿ ನೆನಪಿಸಿಕೊಂಡಿದ್ದಾರೆ

ಶಿಕ್ಷಣ, ತಂತ್ರಜ್ಞಾನ, ನಾವೀನ್ಯತೆ ಅಭಿವೃದ್ಧಿ ಸಹಕಾರ ಮತ್ತು ಮೀನುಗಾರರ ಕಲ್ಯಾಣದಲ್ಲಿ ಸಹಕಾರವನ್ನು ಬಲಪಡಿಸುವ ಕ್ರಮಗಳ ಕುರಿತು ಉಭಯ ನಾಯಕರು ಚರ್ಚಿಸಿದ್ದಾರೆ

ಉಭಯ ದೇಶಗಳ ಪರಸ್ಪರ ಹಂಚಿಕೆಯ  ಹಾಗೂ ಅಭಿವೃದ್ಧಿ ಪ್ರಯಾಣದಲ್ಲಿ ಒಟ್ಟಾಗಿ ಕೆಲಸ ಮಾಡುವ ಭಾರತದ ಬದ್ಧತೆಯನ್ನು ಪ್ರಧಾನಮಂತ್ರಿ ಮೋದಿ ಅವರು ಪುನರುಚ್ಚರಿಸಿದ್ದಾರೆ

ಪ್ರಧಾನಮಂತ್ರಿ ಮೋದಿ ಅವರು ಶ್ರೀಲಂಕಾದ ಅಧ್ಯಕ್ಷರಾದ ಶ್ರೀ ದಿಸಾನಾಯಕ ಅವರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ ಮತ್ತು ನಿರಂತರ ಪರಸ್ಪರ ಬದ್ಧತೆಗಳನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ

Posted On: 17 OCT 2025 4:25PM by PIB Bengaluru

ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಪ್ರಧಾನಮಂತ್ರಿ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಭೇಟಿ ಮಾಡಿದ್ದಾರೆ.

ಆತ್ಮೀಯ ಸ್ವಾಗತವನ್ನು ನೀಡುತ್ತಾ, ಅವರ  ಭೇಟಿಯು ಐತಿಹಾಸಿಕ ಮತ್ತು ಬಹುಮುಖಿ ಭಾರತ-ಶ್ರೀಲಂಕಾ ಸಂಬಂಧಗಳಿಗೆ ಹೊಸ ಆವೇಗವನ್ನು ನೀಡುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿಳಿಸಿದರು.

ಈ ವರ್ಷದ ಏಪ್ರಿಲ್ ನಲ್ಲಿ ಶ್ರೀಲಂಕಾಕ್ಕೆ ತಾನು ನೀಡಿದ್ದ ದೇಶದ ಅಧಿಕೃತ ಭೇಟಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈ ಸಂದರ್ಭದಲ್ಲಿ ನೆನಪಿಸಿಕೊಂಡರು, ಆ ಸಮಯದಲ್ಲಿ ಅಧ್ಯಕ್ಷರಾದ ಶ್ರೀ ಅನುರ ಕುಮಾರ ದಿಸಾನಾಯಕ ಅವರೊಂದಿಗೆ ಸಹಕಾರದ ಎಲ್ಲಾ ಕ್ಷೇತ್ರಗಳನ್ನು ಒಳಗೊಂಡ ಫಲಪ್ರದ ಚರ್ಚೆಗಳನ್ನು ನಡೆಸಿದ್ದರು.

ಶಿಕ್ಷಣ, ತಂತ್ರಜ್ಞಾನ, ನಾವೀನ್ಯತೆ ಅಭಿವೃದ್ಧಿ ಸಹಕಾರ ಮತ್ತು ನಮ್ಮ ಮೀನುಗಾರರ ಕಲ್ಯಾಣ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಸಹಕಾರವನ್ನು ಬಲಪಡಿಸುವ ಕ್ರಮಗಳ ಕುರಿತು ಉಭಯ ನಾಯಕರು ಚರ್ಚಿಸಿದರು.

ಭಾರತ ಮತ್ತು ಶ್ರೀಲಂಕಾ ನಡುವಿನ ವಿಶೇಷ ಸಂಬಂಧಗಳನ್ನು ಎತ್ತಿ ತೋರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಎರಡೂ ದೇಶಗಳ ಪರಸ್ಪರ ಹಂಚಿಕೆಯ ಅಭಿವೃದ್ಧಿ ಪ್ರಯಾಣದಲ್ಲಿ ಒಟ್ಟಾಗಿ ಕೆಲಸ ಮಾಡುವ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಧ್ಯಕ್ಷರಾದ ಶ್ರೀ ದಿಸಾನಾಯಕ ಅವರಿಗೆ ತಮ್ಮ ಆತ್ಮೀಯ ಶುಭಾಶಯಗಳನ್ನು ತಿಳಿಸಿದರು ಮತ್ತು ಅವರ ಜೊತೆಗೆ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅವಕಾಶಗಳನ್ನು ನೋಡುತ್ತಿರುವುದಾಗಿ ಹೇಳಿದರು.

 

*****
 


(Release ID: 2180409) Visitor Counter : 10