ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ದೀಪಾವಳಿಯ ಶುಭಾಶಯಗಳನ್ನು ತಿಳಿಸಿದ ಇಸ್ರೇಲ್ ಪ್ರಧಾನಮಂತ್ರಿ ಅವರಿಗೆ ಧನ್ಯವಾದ ತಿಳಿಸಿ, ಜನ್ಮದಿನದ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ

Posted On: 21 OCT 2025 11:23AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಮಂತ್ರಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಕೂಡಾ ಅರ್ಪಿಸಿದರು. ಇದು ಎರಡೂ ರಾಷ್ಟ್ರಗಳ ನಡುವಿನ ಶಾಶ್ವತ ಸ್ನೇಹವನ್ನು ಪುನರುಚ್ಚರಿಸಿತ್ತದೆ ಎಂದು ಅವರು ತಿಳಿಸಿದರು.

ಶ್ರೀ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಹೇಳಿದ್ದಾರೆ:

“ನನ್ನ ಪ್ರೀತಿಯ ಸ್ನೇಹಿತರೆ, ನಿಮ್ಮ ದೀಪಾವಳಿ ಶುಭಾಶಯಗಳಿಗೆ ತುಂಬುಹೃದಯದ ಧನ್ಯವಾದಗಳು. ನಿಮ್ಮ ಹುಟ್ಟುಹಬ್ಬದಂದು ನಾನು ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ. ನಿಮಗೆ ಉತ್ತಮ ಆರೋಗ್ಯ ಮತ್ತು ಯಶಸ್ಸನ್ನು ಭಗವಂತ ನೀಡಲೆಂದು ಹಾರೈಸುತ್ತೇನೆ. ಭಾರತ-ಇಸ್ರೇಲ್ ಕಾರ್ಯತಂತ್ರದ ಸಹಭಾಗಿತ್ವವು ಮುಂಬರುವ ವರ್ಷಗಳಲ್ಲಿ ಹೀಗೆಯೇ ಮುಂದುವರಿಯಲಿ.

@netanyahu”

 

****


(Release ID: 2181117) Visitor Counter : 5