ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾಯಿ ದೂಜ್ ಅಂಗವಾಗಿ ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ

Posted On: 23 OCT 2025 9:03AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾಯಿ ದೂಜ್ ಪವಿತ್ರ ಸಂದರ್ಭದಲ್ಲಿ ದೇಶಾದ್ಯಂತದ ನಾಗರಿಕರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಕುರಿತು ಎಕ್ಸ್ ಖಾತೆಯಲ್ಲಿ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಬರೆದಿದ್ದಾರೆ:

“ಭಾಯಿ ದೂಜ್ ಸಂದರ್ಭದಲ್ಲಿ ಎಲ್ಲರಿಗೂ ಹೃತ್ಪೂರ್ವಕ ಶುಭಾಶಯಗಳು. ಸಹೋದರ ಮತ್ತು ಸಹೋದರಿಯ ನಡುವಿನ ಪರಸ್ಪರ ಪ್ರೀತಿ ಮತ್ತು ನಂಬಿಕೆಯನ್ನು ಸಂಕೇತಿಸುವ ಈ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ತರಲಿ. ಈ ಸಂಬಂಧದ ಬಂಧವು ಹೊಸ ಬಲವನ್ನು ಪಡೆಯಲಿ ಎಂಬುದು ನನ್ನ ಪ್ರಾಮಾಣಿಕ ಆಶಯವಾಗಿದೆ ಎಂದು ಹೇಳಿದ್ದಾರೆ.”

 

****


(Release ID: 2181697) Visitor Counter : 6