ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರು ಮಲೇಷ್ಯಾದ ಪ್ರಧಾನಮಂತ್ರಿ ಅವರೊಂದಿಗೆ ಮಾತನಾಡಿ ಆಸಿಯಾನ್ ಅಧ್ಯಕ್ಷತೆಗಾಗಿ ಅವರಿಗೆ ಅಭಿನಂದನೆ ಸಲ್ಲಿಸಿದರು


ಪ್ರಧಾನಮಂತ್ರಿ ಅವರು  ವರ್ಚುವಲ್ ಮೂಲಕ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ

Posted On: 23 OCT 2025 10:13AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಲೇಷ್ಯಾದ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರೊಂದಿಗೆ ಆತ್ಮೀಯ ಮತ್ತು ಸೌಹಾರ್ದಯುತ ಮಾತುಕತೆ ನಡೆಸಿದರು.

ಮಾತುಕತೆಯ ಸಂದರ್ಭದಲ್ಲಿ, ಮಲೇಷ್ಯಾ ಆಸಿಯಾನ್ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದಕ್ಕಾಗಿ ಶ್ರೀ ಮೋದಿ ಅವರು ಪ್ರಧಾನಮಂತ್ರಿ ಇಬ್ರಾಹಿಂ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ಮಲೇಷ್ಯಾದ ನಾಯಕತ್ವದಲ್ಲಿ ಮುಂಬರುವ ಆಸಿಯಾನ್ ಸಂಬಂಧಿತ ಶೃಂಗಸಭೆಗಳನ್ನು ಯಶಸ್ವಿಯಾಗಿ ನಡೆಸಲು ಶುಭ ಹಾರೈಸಿದರು.

ಪ್ರಧಾನಮಂತ್ರಿ ಮೋದಿ ಅವರು ಆಸಿಯಾನ್-ಭಾರತ ಶೃಂಗಸಭೆಯಲ್ಲಿ ವರ್ಚುವಲ್ ಮೂಲಕ ಭಾಗವಹಿಸಲು ಆಸಕ್ತಿಯನ್ನು ವ್ಯಕ್ತಪಡಿಸಿದರು ಮತ್ತು ಆಸಿಯಾನ್-ಭಾರತ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದರು.

ಎಕ್ಸ್ ಖಾತೆಯ ಪೋಸ್ಟ್ ನಲ್ಲಿ ಶ್ರೀ ಮೋದಿ ಹೀಗೆ ಹೇಳಿದ್ದಾರೆ:

"ನನ್ನ ಆತ್ಮೀಯ ಗೆಳೆಯರಾದ, ಮಲೇಷ್ಯಾದ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರೊಂದಿಗೆ ಆತ್ಮೀಯ ಮಾತುಕತೆ ನಡೆಸಿದೆ. ಮಲೇಷ್ಯಾದ ಆಸಿಯಾನ್ ಅಧ್ಯಕ್ಷತೆಗಾಗಿ ಅವರನ್ನು ಅಭಿನಂದಿಸಿದ್ದೇನೆ ಮತ್ತು ಮುಂಬರುವ ಶೃಂಗಸಭೆಗಳ ಯಶಸ್ಸಿಗೆ ಶುಭವನ್ನು  ಕೋರಿದ್ದೇನೆ. ಆಸಿಯಾನ್-ಭಾರತ ಶೃಂಗಸಭೆಯಲ್ಲಿ ವರ್ಚುವಲ್ ಮೂಲಕ  ಭಾಗವಹಿಸಲು ಹಾಗು ಆಸಿಯಾನ್-ಭಾರತ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಎದುರು ನೋಡುತ್ತಿದ್ದೇನೆ.

@anwaribrahim”

 

*****


(Release ID: 2181712) Visitor Counter : 6