ಪ್ರಧಾನ ಮಂತ್ರಿಯವರ ಕಛೇರಿ
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಭೀಕರ ಬಸ್ ಬೆಂಕಿ ದುರಂತ: ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
ಪ್ರಧಾನಮಂತ್ರಿ ಅವರು ಪಿ.ಎಂ.ಎನ್.ಆರ್.ಎಫ್ ನಿಂದ ಪರಿಹಾರ ಘೋಷಿಸಿದ್ದಾರೆ
ಪ್ರಕಟಣಾ ದಿನಾಂಕ:
24 OCT 2025 9:02AM by PIB Bengaluru
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಬಸ್ ಬೆಂಕಿ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ(PMNRF) ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಇದನ್ನು ಪ್ರಧಾನ ಮಂತ್ರಿಯವರ ಕಛೇರಿ ಎಕ್ಸ್ ಪೋಸ್ಟ್ ನಲ್ಲಿ ಘೋಷಿಸಿದ್ದು:
"ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಬಸ್ ಗೆ ಬೆಂಕಿ ಹತ್ತಿಉರಿದು ಜೀವಹಾನಿಯಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬದವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಸ್ಥರಿಗೆ ಪಿ.ಎಂ.ಎನ್.ಆರ್.ಎಫ್ ನಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂಪಾಯಿ ನೀಡಲಾಗುವುದು: PM @narendramodi.”
“ఆంధ్రప్రదేశ్లోని కర్నూలు జిల్లాలో జరిగిన ప్రమాదంలో ప్రాణనష్టం చాలా బాధాకరం. ఈ క్లిష్ట సమయంలో బాధిత ప్రజలు మరియు వారి కుటుంబాలకు నా ప్రగాఢ సానుభూతిని తెలియజేస్తూ , గాయపడినవారు త్వరగా కోలుకోవాలని ప్రార్థిస్తున్నాను. ప్రమాదంలో మరణించిన వారి కుటుంబాలకు రూ. 2 లక్షలు, గాయపడిన వారికి రూ. 50,000 ఎక్స్ గ్రేషియా పిఎంఎన్ఆర్ఎఫ్ నుండి ఇవ్వబడుతుంది: PM @narendramodi"
****
(ಪ್ರಕಟಣೆ ಐ.ಡಿ.: 2182011)
ವಿಸಿಟರ್ ಕೌಂಟರ್ : 38
ಪ್ರಕಟಣೆಯನ್ನು ಇದರಲ್ಲಿ ಓದಿ:
Odia
,
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Tamil
,
Telugu
,
Malayalam