ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಪಿಯೂಷ್ ಪಾಂಡೆ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
ಪ್ರಕಟಣಾ ದಿನಾಂಕ:
24 OCT 2025 11:29AM by PIB Bengaluru
ಜಾಹೀರಾತು ಮತ್ತು ಸಂವಹನ ಕ್ಷೇತ್ರದ ದಿಗ್ಗಜ ಶ್ರೀ ಪಿಯೂಷ್ ಪಾಂಡೆ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀ ಪಾಂಡೆ ಅವರ ಅನನ್ಯ ಸೃಜನಶೀಲತೆ ಮತ್ತು ಭಾರತದ ಜಾಹೀರಾತು ವಲಯಕ್ಕೆ ಅವರ ಅಮೋಘ ಕೊಡುಗೆಗಳು ಸ್ಮರಣೀಯ ಎಂದು ಪ್ರಧಾನಮಂತ್ರಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ಶ್ರೀ ಪಿಯೂಷ್ ಪಾಂಡೆ ತಮ್ಮ ಸೃಜನಶೀಲತೆಯಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಜಾಹೀರಾತು ಮತ್ತು ಸಂವಹನ ವಲಯಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರೊಂದಿಗಿನ ಹಲವು ವರ್ಷಗಳ ಮಾತುಕತೆಯನ್ನು ನಾನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇನೆ. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ."
*****
(ಪ್ರಕಟಣೆ ಐ.ಡಿ.: 2182069)
ವಿಸಿಟರ್ ಕೌಂಟರ್ : 30
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam