ಉಪರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ವಾರ್ತಾ ಮತ್ತು ಪ್ರಸಾರ ಸಚಿವಾಲಯಗಳಲ್ಲಿನ ಪ್ರಮುಖ ಉಪಕ್ರಮಗಳ ಕುರಿತು ಉಪರಾಷ್ಟ್ರಪತಿ ಅವರಿಗೆ ವಿವರಣೆ


ಭಾರತದ ಡಿಜಿಟಲ್ ರೂಪಾಂತರವನ್ನು ಮುನ್ನಡೆಸುತ್ತಾ ಮಾಹಿತಿ ಮತ್ತು ಸಂವಹನ ಪರಿಸರ ವ್ಯವಸ್ಥೆಯನ್ನು ಬಲಪಡಿಸಲು ಶ್ರಮಿಸುತ್ತಿರುವ ಸಚಿವಾಲಯಗಳಿಗೆ ಉಪರಾಷ್ಟ್ರಪತಿ ಶ್ಲಾಘನೆ

ಎರಡನೇ ಮತ್ತು ಮೂರನೇ ಶ್ರೇಣಿಯ ನಗರಗಳನ್ನು ಸಾಫ್ಟ್‌ವೇರ್ ಮತ್ತು ನಾವಿನ್ಯತೆಯ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ಆದ್ಯತೆ ನೀಡುವಂತೆ ಶ್ರೀ ಸಿ. ಪಿ. ರಾಧಾಕೃಷ್ಣನ್ ಕರೆ

Posted On: 24 OCT 2025 8:25PM by PIB Bengaluru

ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ, ವಾರ್ತಾ ಮತ್ತು ಪ್ರಸಾರ ಖಾತೆ ಹಾಗೂ ರೈಲ್ವೆ ಖಾತೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಮತ್ತು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವರಾದ ಶ್ರೀ ಜಿತಿನ್ ಪ್ರಸಾದ ಅವರು ಸಂಸತ್ ಭವನದಲ್ಲಿ ಇಂದು ಭಾರತದ ಉಪರಾಷ್ಟ್ರಪತಿ ಶ್ರೀ ಸಿ.ಪಿ.ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿದರು.

ಭಾರತದ ಡಿಜಿಟಲ್ ರೂಪಾಂತರವನ್ನು ಮುನ್ನಡೆಸುವ ಹಾಗೂ ರಾಷ್ಟ್ರದ ಮಾಹಿತಿ ಮತ್ತು ಸಂವಹನ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಎಲೆಕ್ಟ್ರಾನಿಕ್ಸ್ ಮತ್ತು ಐ.ಟಿ. ಹಾಗೂ ವಾರ್ತಾ ಮತ್ತು ಪ್ರಸಾರ ಸಚಿವಾಲಯಗಳ ಪ್ರಮುಖ ಉಪಕ್ರಮಗಳು, ಸಾಧನೆಗಳು ಮತ್ತು ಭವಿಷ್ಯದ ಮಾರ್ಗಸೂಚಿಗಳ ಬಗ್ಗೆ ಸಭೆಯಲ್ಲಿ ಉಪರಾಷ್ಟ್ರಪತಿಗಳಿಗೆ ವಿವರಿಸಲಾಯಿತು.

ಡಿಜಿಟಲ್ ಸಬಲೀಕೃತ, ನಾವಿನ್ಯತೆ-ಚಾಲಿತ ಮತ್ತು ಮಾಹಿತಿಯುಕ್ತ ಜಾಗೃತ ಸಮಾಜವನ್ನು ನಿರ್ಮಿಸಲು ಪರಿವರ್ತನಾತ್ಮಕ ಕೊಡುಗೆ ನೀಡಿರುವ ಎರಡೂ ಸಚಿವಾಲಯಗಳನ್ನು ಉಪರಾಷ್ಟ್ರಪತಿಗಳು ಶ್ಲಾಘಿಸಿದರು. 2ನೇ ಮತ್ತು 3ನೇ ಶ್ರೇಣಿಯ ನಗರಗಳನ್ನು ಉದಯೋನ್ಮುಖ ಸಾಫ್ಟ್ ವೇರ್ ಮತ್ತು ನಾವಿನ್ಯತಾ ಕೇಂದ್ರಗಳಾಗಿ ಅಭಿವೃದ್ಧಿಪಡಿಸುವತ್ತ ಗಮನಹರಿಸಲು ಆದ್ಯತೆ ನೀಡಬೇಕಿದೆ ಎಂದು ಉಪರಾಷ್ಟ್ರಪತಿ ಉಲ್ಲೇಖಿಸಿದರು. ಸಾಮಾಜಿಕ ಮಾಧ್ಯಮದ ಜವಾಬ್ದಾರಿಯುತ ಬಳಕೆಯ ಪ್ರಾಮುಖ್ಯತೆ ಹಾಗೂ ಡಿಜಿಟಲ್ ವಿಷಯ ನಿರೂಪಣೆಯಲ್ಲಿ ನಾವಿನ್ಯತೆಯನ್ನು ಉತ್ತೇಜಿಸುವ ಮಹತ್ವವನ್ನು ಅವರು ಉಲ್ಲೇಖಿಸಿದರು.

****


(Release ID: 2182371) Visitor Counter : 13