ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜಪಾನ್ ಪ್ರಧಾನಮಂತ್ರಿ ಗೌರವಾನ್ವಿತ ಸನೇ ತಕೈಚಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ; ಭಾರತ-ಜಪಾನ್ ವಿಶೇಷ ಕಾರ್ಯತಾಂತ್ರಿಕ ಮತ್ತು ಜಾಗತಿಕ ಸಹಭಾಗಿತ್ವ ಮತ್ತಷ್ಟು ಮುಂದುವರಿಸುವ ಬಗ್ಗೆ ಚರ್ಚೆ

Posted On: 29 OCT 2025 1:14PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಪಾನ್ ಪ್ರಧಾನಮಂತ್ರಿ ಗೌರವಾನ್ವಿತ ಸನೇ ತಕೈಚಿ ಅವರೊಂದಿಗೆ ಆತ್ಮೀಯ ಮಾತುಕತೆ ನಡೆಸಿದರು.

ಶ್ರೀ ನರೇಂದ್ರ ಮೋದಿ ಅವರು ತಕೈಚಿ ಅವರು ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕೆ ಅಭಿನಂದಿಸಿದರು ಮತ್ತು ಅವರು ಯಶಸ್ವಿಯಾಗಿ ಅಧಿಕಾರಾವಧಿ ಪೂರೈಸಲು ಶುಭಾಶಯಗಳನ್ನು ತಿಳಿಸಿದರು.

ಉಭಯ ನಾಯಕರು ಭಾರತ-ಜಪಾನ್ ವಿಶೇಷ ಕಾರ್ಯತಾಂತ್ರಿಕ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಮುಂದುವರಿಸಿಕೊಂಡು ಹೋಗುವ ಬಗ್ಗೆ, ವಿಶೇಷವಾಗಿ ಆರ್ಥಿಕ ಭದ್ರತೆ, ರಕ್ಷಣಾ ಸಹಕಾರ ಮತ್ತು ಪ್ರತಿಭೆಗಳ ಸಂಚಾರದ ಮೇಲೆ ನಿರ್ದಿಷ್ಟ ಗಮನ ಹರಿಸುವ ಬಗ್ಗೆ ಚರ್ಚೆ ನಡೆಸಿದರು. 

ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ಸದೃಢವಾದ ಭಾರತ-ಜಪಾನ್ ಸಂಬಂಧಗಳು ಅತ್ಯಗತ್ಯ ಎಂಬುದನ್ನು ಇಬ್ಬರೂ ನಾಯಕರು ಒಪ್ಪಿದರು. 

ಪ್ರಧಾನಮಂತ್ರಿ ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ;

“ಜಪಾನ್ ಪ್ರಧಾನಮಂತ್ರಿ ಸನೇ ತಕೈಚಿ ಅವರೊಂದಿಗೆ ಆತ್ಮೀಯ ಸಮಾಲೋಚನೆ ನಡೆಸಿದೆನು. ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅವರನ್ನು ಅಭಿನಂದಿಸಲಾಯಿತು ಮತ್ತು ಆರ್ಥಿಕ ಭದ್ರತೆ, ರಕ್ಷಣಾ ಸಹಕಾರ ಮತ್ತು ಪ್ರತಿಭೆಗಳ ಸಂಚಾರದ ಮೇಲೆ ಕೇಂದ್ರೀಕರಿಸಿ ಭಾರತ-ಜಪಾನ್ ವಿಶೇಷ ಕಾರ್ಯತಾಂತ್ರಿಕ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಮುನ್ನಡೆಸುವ ಬಗ್ಗೆ ನಮ್ಮ ಹಂಚಿಕೆಯ ದೂರದೃಷ್ಟಿಯನ್ನು ಚರ್ಚಿಸಲಾಯಿತು. ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ಸದೃಢ ಭಾರತ-ಜಪಾನ್ ಸಂಬಂಧಗಳು ಅತ್ಯಗತ್ಯ ಎಂದು ನಾವು ಒಪ್ಪಿಕೊಂಡೆವು.

@takaichi_sanae”

 

*****


(Release ID: 2183774) Visitor Counter : 9