ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿಯಂದು ಭಾರತ ಅವರಿಗೆ ಗೌರವ ನಮನ ಸಲ್ಲಿಸುತ್ತದೆ: ಪ್ರಧಾನಮಂತ್ರಿ

Posted On: 31 OCT 2025 8:05AM by PIB Bengaluru

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿಯಂದು ಭಾರತ ಅವರಿಗೆ ಗೌರವ ನಮನ ಸಲ್ಲಿಸುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪರಂಪರೆಯನ್ನು ಗೌರವಿಸಿದ ಪ್ರಧಾನಮಂತ್ರಿ ಅವರು, ಸರ್ದಾರ್ ಪಟೇಲ್ ಅವರು ಭಾರತದ ಏಕೀಕರಣದ ಹಿಂದಿನ ಪ್ರೇರಕ ಶಕ್ತಿಯಾಗಿದ್ದರು ಮತ್ತು ಅದರ ರಚನಾತ್ಮಕ ವರ್ಷಗಳಲ್ಲಿ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು ಎಂದು ಹೇಳಿದರು. ರಾಷ್ಟ್ರೀಯ ಸಮಗ್ರತೆ, ಉತ್ತಮ ಆಡಳಿತ ಮತ್ತು ಸಾರ್ವಜನಿಕ ಸೇವೆಗೆ ಸರ್ದಾರ್ ಪಟೇಲ್ ಅವರ ಅಚಲ ಬದ್ಧತೆ ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತಲೇ ಇದೆ ಎಂದು ಅವರು ಹೇಳಿದರು.

ಸರ್ದಾರ್ ಪಟೇಲ್ ಅವರ ಏಕೀಕೃತ, ಬಲಿಷ್ಠ ಮತ್ತು ಸ್ವಾವಲಂಬಿ ಭಾರತದ ದೃಷ್ಟಿಕೋನವನ್ನು ಎತ್ತಿಹಿಡಿಯುವ ರಾಷ್ಟ್ರದ ಸಾಮೂಹಿಕ ಸಂಕಲ್ಪವನ್ನು ಪ್ರಧಾನಮಂತ್ರಿ ಪುನರುಚ್ಚರಿಸಿದರು.

ಈ ಕುರಿತು ಪ್ರಧಾನಮಂತ್ರಿ ಅವರು ಎಕ್ಸ್‌ ಪೊಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:  

"ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿಯಂದು ಭಾರತ ಅವರಿಗೆ ಗೌರವ ನಮನ ಸಲ್ಲಿಸುತ್ತದೆ. ಅವರು ಭಾರತದ ಏಕೀಕರಣದ ಹಿಂದಿನ ಪ್ರೇರಕ ಶಕ್ತಿಯಾಗಿದ್ದರು, ಹೀಗಾಗಿ ನಮ್ಮ ರಾಷ್ಟ್ರದ ಭವಿಷ್ಯವನ್ನು ಅದರ ರಚನಾತ್ಮಕ ವರ್ಷಗಳಲ್ಲಿ ರೂಪಿಸಿದರು. ರಾಷ್ಟ್ರೀಯ ಸಮಗ್ರತೆ, ಉತ್ತಮ ಆಡಳಿತ ಮತ್ತು ಸಾರ್ವಜನಿಕ ಸೇವೆಗೆ ಅವರ ಅಚಲ ಬದ್ಧತೆಯು ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತಲೇ ಇದೆ. ಏಕೀಕೃತ, ಬಲವಾದ ಮತ್ತು ಸ್ವಾವಲಂಬಿ ಭಾರತದ ಅವರ ದೃಷ್ಟಿಕೋನವನ್ನು ಎತ್ತಿಹಿಡಿಯುವ ನಮ್ಮ ಸಾಮೂಹಿಕ ಸಂಕಲ್ಪವನ್ನು ನಾವು ಪುನರುಚ್ಚರಿಸುತ್ತೇವೆ."

 

 

****


(Release ID: 2184461) Visitor Counter : 4