ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಧ್ಯಪ್ರದೇಶ ಸಂಸ್ಥಾಪನಾ ದಿನದಂದು ಶುಭ ಕೋರಿದ ಪ್ರಧಾನಮಂತ್ರಿ

प्रविष्टि तिथि: 01 NOV 2025 9:33AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ರಾಜ್ಯದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಭವ್ಯ ಇತಿಹಾಸ ಮತ್ತು ಶ್ರೀಮಂತ ಸಾಂಸ್ಕೃತಿಕ ಪರಂಪರೆಗೆ ಹೆಸರುವಾಸಿಯಾದ ಮಧ್ಯಪ್ರದೇಶವು ಇಂದು ತನ್ನ ಜನರ ಆಕಾಂಕ್ಷೆಗಳನ್ನು ಮುಂಚೂಣಿಯಲ್ಲಿಡುವ ಮೂಲಕ ಪ್ರತಿಯೊಂದು ಕ್ಷೇತ್ರದಲ್ಲೂ ತ್ವರಿತ ಪ್ರಗತಿಯನ್ನು ಸಾಧಿಸುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಮಧ್ಯಪ್ರದೇಶದ ಜನರ ಪ್ರತಿಭೆ ಮತ್ತು ಕಠಿಣ ಪರಿಶ್ರಮವು ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ಅಮೂಲ್ಯ ಪಾತ್ರ ವಹಿಸುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಈ ಕುರಿತು ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ;

"ರಾಜ್ಯದ ಭವ್ಯ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪಾಲಿಸುವ ಮಧ್ಯಪ್ರದೇಶದ ಎಲ್ಲಾ ಕುಟುಂಬ ಸದಸ್ಯರಿಗೆ ಅವರ ರಾಜ್ಯ ಸಂಸ್ಥಾಪನಾ ದಿನದಂದು ಹೃತ್ಪೂರ್ವಕ ಶುಭಾಶಯಗಳು. ದೇಶದ ಹೃದಯಭಾಗದಲ್ಲಿರುವ ನಮ್ಮ ಈ ರಾಜ್ಯವು ಜನರ ಆಕಾಂಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿಗೆ ಹೊಸ ಪ್ರಚೋದನೆಯನ್ನು ನೀಡುತ್ತಿದೆ. ಇಲ್ಲಿನ ಪ್ರತಿಭಾವಂತ ಮತ್ತು ಕಠಿಣ ಪರಿಶ್ರಮಿ ಜನರು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಈಡೇರಿಸುವಲ್ಲಿ ಅಮೂಲ್ಯ ಪಾತ್ರ ವಹಿಸಲಿದ್ದಾರೆ ಎಂದು ನನಗೆ ಖಾತ್ರಿಯಿದೆ.”

****


(रिलीज़ आईडी: 2185045) आगंतुक पटल : 23
इस विज्ञप्ति को इन भाषाओं में पढ़ें: Odia , English , Urdu , हिन्दी , Marathi , Manipuri , Bengali , Assamese , Punjabi , Gujarati , Tamil , Telugu , Malayalam