ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಆಂಧ್ರಪ್ರದೇಶದ ಶ್ರೀಕಾಕುಲಂನಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ತೀವ್ರ ಸಂತಾಪ


ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ

Posted On: 01 NOV 2025 1:59PM by PIB Bengaluru

ಆಂಧ್ರಪ್ರದೇಶದ ಶ್ರೀಕಾಕುಲಂನಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶ್ರೀ ನರೇಂದ್ರ ಮೋದಿ ಅವರು ಹಾರೈಸಿದ್ದಾರೆ.

ಪ್ರಧಾನಮಂತ್ರಿ ಅವರು ಪಿ.ಎಂ.ಎನ್.ಆರ್.ಎಫ್.ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನಮಂತ್ರಿ ಕಾರ್ಯಾಲಯ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ;

"ಆಂಧ್ರಪ್ರದೇಶದ ಶ್ರೀಕಾಕುಲಂನಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಾಲ್ತುಳಿತದಿಂದ ದುಃಖಿತನಾಗಿದ್ದೇನೆ. ತಮ್ಮ ಹತ್ತಿರದ ಮತ್ತು ಆತ್ಮೀಯರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.

ಪ್ರಾಣ ಕಳೆದುಕೊಂಡವರ ಹತ್ತಿರದ ಬಂಧುಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಮಂತ್ರಿ @narendramodi" ಎಂದು ಹೇಳಿದ್ದಾರೆ.

“ఆంధ్రప్రదేశ్‌లోని శ్రీకాకుళంలోగల వెంకటేశ్వర స్వామి ఆలయంలో జరిగిన తొక్కిసలాట అత్యంత బాధాకరం. తమ సన్నిహితులను,కుటుంబసభ్యులను కోల్పోయిన వారికి ప్రగాఢ సంతాపం తెలియజేస్తున్నాను. గాయపడినవారు త్వరగా కోలుకోవాలని ప్రార్థిస్తున్నాను.

ప్రాణాలు కోల్పోయిన వారి బంధువులకు పీఎం ఎన్ ఆర్ ఎఫ్ ద్వారా రూ. 2 లక్షల ఎక్స్‌గ్రేషియా,గాయపడిన వారికి రూ. 50,000 మంజూరు చేస్తున్నాం: ప్రధాన మంత్రి @narendramodi”

 

*****


(Release ID: 2185231) Visitor Counter : 5