ಪ್ರಧಾನ ಮಂತ್ರಿಯವರ ಕಛೇರಿ
ನವೆಂಬರ್ 3 ರಂದು ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ 2025 ಅನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ
ಖಾಸಗಿ ವಲಯ ನೇತೃತ್ವದ ಸಂಶೋಧನೆ ಮತ್ತು ಅಭಿವೃದ್ಧಿ ಪರಿಸರ ವ್ಯವಸ್ಥೆಯನ್ನು ಬಲಪಡಿಸಲು 1 ಲಕ್ಷ ಕೋಟಿ ರೂ.ಗಳ ಸಂಶೋಧನಾ ಅಭಿವೃದ್ಧಿ ಮತ್ತು ನಾವೀನ್ಯತೆ ಯೋಜನೆಗೆ ಚಾಲನೆ ನೀಡಲಿರುವ ಪ್ರಧಾನಮಂತ್ರಿ
ಎಸ್.ಟಿ.ಐ.ಸಿ 2025 ಶೈಕ್ಷಣಿಕ, ಸಂಶೋಧನಾ ಸಂಸ್ಥೆಗಳು, ಉದ್ಯಮ ಮತ್ತು ಸರ್ಕಾರದ 3,000ಕ್ಕೂ ಹೆಚ್ಚು ಭಾಗವಹಿಸುವವರಿಗೆ ಸಾಕ್ಷಿಯಾಗಲಿದೆ
ಕೃತಕ ಬುದ್ಧಿಮತ್ತೆ, ಜೈವಿಕ ಉತ್ಪಾದನೆ, ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಉತ್ಪಾದನೆ, ಉದಯೋನ್ಮುಖ ಕೃಷಿ ತಂತ್ರಜ್ಞಾನಗಳು, ಕ್ವಾಂಟಮ್ ಸೈನ್ಸ್ ಸೇರಿದಂತೆ ಚರ್ಚೆಗೆ 11 ಪ್ರಮುಖ ವಿಷಯಾಧಾರಿತ ಕ್ಷೇತ್ರಗಳು
प्रविष्टि तिथि:
02 NOV 2025 9:29AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 3 ರಂದು ಬೆಳಗ್ಗೆ 9:30ರ ಸುಮಾರಿಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ (ಇ.ಎಸ್.ಟಿ.ಐ.ಸಿ) 2025 ಅನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ದೇಶದ ಸಂಶೋಧನೆ ಮತ್ತು ಅಭಿವೃದ್ಧಿ ಪರಿಸರ ವ್ಯವಸ್ಥೆಗೆ ಪ್ರಮುಖ ಉತ್ತೇಜನವಾಗಿ, ಪ್ರಧಾನಮಂತ್ರಿ ಅವರು 1 ಲಕ್ಷ ಕೋಟಿ ರೂ.ಗಳ ಸಂಶೋಧನಾ ಅಭಿವೃದ್ಧಿ ಮತ್ತು ನಾವೀನ್ಯತೆ (ಆರ್.ಡಿ.ಐ) ಯೋಜನೆಯ ನಿಧಿಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆಯು ದೇಶದಲ್ಲಿ ಖಾಸಗಿ ವಲಯ ಚಾಲಿತ ಸಂಶೋಧನೆ ಮತ್ತು ಅಭಿವೃದ್ಧಿ ಪರಿಸರ ವ್ಯವಸ್ಥೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.
ಇ.ಎಸ್.ಟಿ.ಐ.ಸಿ 2025, ನವೆಂಬರ್ 3-5ರವರೆಗೆ ನಡೆಯಲಿದೆ. ಈ ಸಮಾವೇಶವು ನೊಬೆಲ್ ಪ್ರಶಸ್ತಿ ಪುರಸ್ಕೃತರು, ಪ್ರಖ್ಯಾತ ವಿಜ್ಞಾನಿಗಳು, ನಾವೀನ್ಯಕಾರರು ಮತ್ತು ನೀತಿ ನಿರೂಪಕರೊಂದಿಗೆ ಶೈಕ್ಷಣಿಕ, ಸಂಶೋಧನಾ ಸಂಸ್ಥೆಗಳು, ಉದ್ಯಮ ಮತ್ತು ಸರ್ಕಾರದ 3,000ಕ್ಕೂ ಹೆಚ್ಚು ಪ್ರತಿನಿಧಿಗಳನ್ನು ಒಟ್ಟುಗೂಡಿಸುತ್ತದೆ. ಸುಧಾರಿತ ವಸ್ತುಗಳು ಮತ್ತು ಉತ್ಪಾದನೆ, ಕೃತಕ ಬುದ್ಧಿಮತ್ತೆ, ಜೈವಿಕ ಉತ್ಪಾದನೆ, ನೀಲಿ ಆರ್ಥಿಕತೆ, ಡಿಜಿಟಲ್ ಸಂವಹನಗಳು, ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಉತ್ಪಾದನೆ, ಉದಯೋನ್ಮುಖ ಕೃಷಿ ತಂತ್ರಜ್ಞಾನಗಳು, ಇಂಧನ, ಪರಿಸರ ಮತ್ತು ಹವಾಮಾನ, ಆರೋಗ್ಯ ಮತ್ತು ವೈದ್ಯಕೀಯ ತಂತ್ರಜ್ಞಾನಗಳು, ಕ್ವಾಂಟಮ್ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಬಾಹ್ಯಾಕಾಶ ತಂತ್ರಜ್ಞಾನಗಳು ಸೇರಿದಂತೆ 11 ಪ್ರಮುಖ ವಿಷಯಾಧಾರಿತ ಕ್ಷೇತ್ರಗಳ ಮೇಲೆ ಚರ್ಚೆಗಳು ಕೇಂದ್ರೀಕರಿಸುತ್ತವೆ.
ಎಸ್.ಟಿ.ಐ.ಸಿ 2025 ಪ್ರಮುಖ ವಿಜ್ಞಾನಿಗಳ ಮಾತುಕತೆಗಳು, ಪ್ಯಾನಲ್ ಚರ್ಚೆಗಳು, ಪ್ರಸ್ತುತಿಗಳು ಮತ್ತು ತಂತ್ರಜ್ಞಾನ ಪ್ರದರ್ಶನಗಳನ್ನು ಒಳಗೊಂಡಿರುತ್ತದೆ. ಇದು ಭಾರತದ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಸರ ವ್ಯವಸ್ಥೆಯನ್ನು ಬಲಪಡಿಸಲು ಸಂಶೋಧಕರು, ಉದ್ಯಮ ಮತ್ತು ಯುವ ನವೋದ್ಯಮಿಗಳ ನಡುವೆ ಸಹಯೋಗಕ್ಕೆ ವೇದಿಕೆಯನ್ನು ಒದಗಿಸುತ್ತದೆ.
****
(रिलीज़ आईडी: 2185419)
आगंतुक पटल : 31
इस विज्ञप्ति को इन भाषाओं में पढ़ें:
Malayalam
,
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu