ಪ್ರಧಾನ ಮಂತ್ರಿಯವರ ಕಛೇರಿ
ಐ.ಸಿ.ಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025 ಗೆದ್ದ ಭಾರತೀಯ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ
Posted On:
03 NOV 2025 6:14AM by PIB Bengaluru
ಐ.ಸಿ.ಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025 ಫೈನಲ್ ನಲ್ಲಿ ಅದ್ಭುತ ಗೆಲುವು ಸಾಧಿಸಿದ ಭಾರತೀಯ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಈ ಕುರಿತು ಪ್ರಧಾನಮಂತ್ರಿ ಅವರು ಹೀಗೆ ಟ್ವೀಟ್ ಮಾಡಿ ಮಾಡಿದ್ದಾರೆ:
"ಐ.ಸಿ.ಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025 ಫೈನಲ್ ನಲ್ಲಿ ಭಾರತ ತಂಡದ ಅದ್ಭುತ ಗೆಲುವು. ಫೈನಲ್ ನಲ್ಲಿ ಅವರ ಪ್ರದರ್ಶನವು ಉತ್ತಮ ಕೌಶಲ್ಯ ಮತ್ತು ಆತ್ಮವಿಶ್ವಾಸದಿಂದ ಗುರುತಿಸಲ್ಪಟ್ಟಿದೆ. ಪಂದ್ಯಾವಳಿಯುದ್ದಕ್ಕೂ ತಂಡವು ಅಸಾಧಾರಣ ಸಂಘಟಿತ ಹೋರಾಟ ಮತ್ತು ದೃಢತೆಯನ್ನು ಪ್ರದರ್ಶಿಸಿತು. ನಮ್ಮ ಆಟಗಾರ್ತಿಯರಿಗೆ ಅಭಿನಂದನೆಗಳು. ಈ ಐತಿಹಾಸಿಕ ಗೆಲುವು ಭವಿಷ್ಯದ ಚಾಂಪಿಯನ್ ಗಳನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸುತ್ತದೆ.
#WomensWorldCup2025"
*****
(Release ID: 2185767)
Visitor Counter : 8
Read this release in:
Odia
,
Malayalam
,
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Tamil
,
Telugu