ಉಪರಾಷ್ಟ್ರಪತಿಗಳ ಕಾರ್ಯಾಲಯ
ಭಾರತದ ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ನವೆಂಬರ್ 9, 2025 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ
Posted On:
08 NOV 2025 2:12PM by PIB Bengaluru
ಭಾರತದ ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಅಧಿಕಾರ ವಹಿಸಿಕೊಂಡ ನಂತರ ನವೆಂಬರ್ 9, 2025 ರಂದು ಕರ್ನಾಟಕಕ್ಕೆ ತಮ್ಮ ಮೊದಲ ಭೇಟಿಯನ್ನು ನೀಡಲಿದ್ದಾರೆ
ಉಪರಾಷ್ಟ್ರಪತಿ ಅವರು ಹಾಸನದ ಶ್ರವಣಬೆಳಗೊಳದಲ್ಲಿ ಪರಮಪೂಜ್ಯ ಆಚಾರ್ಯ ಶ್ರೀ 108 ಶಾಂತಿ ಸಾಗರ್ ಮಹಾರಾಜ್ ಅವರ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಿ, ಗೌರವ ಸಲ್ಲಿಸಲಿದ್ದಾರೆ. ಈ ಕಾರ್ಯಕ್ರಮವು 1925ರಲ್ಲಿ ಶ್ರವಣಬೆಳಗೊಳಕ್ಕೆ ಚಾರಿತ್ರ ಚಕ್ರವರ್ತಿ ಆಚಾರ್ಯ ಶ್ರೀ 108 ಶಾಂತಿ ಸಾಗರ್ ಮಹಾರಾಜರ ಮೊದಲ ಭೇಟಿಯ ಶತಮಾನೋತ್ಸವ ವರ್ಷವನ್ನು ಆಚರಿಸುತ್ತದೆ.
ಸ್ಮರಣಾರ್ತ ಕಾರ್ಯಕ್ರಮದ ಸಂದರ್ಭದಲ್ಲಿ, ಉಪರಾಷ್ಟ್ರಪತಿ ಅವರು ಆಚಾರ್ಯ ಶ್ರೀ ಶಾಂತಿ ಸಾಗರ್ ಮಹಾರಾಜರ ವಿಗ್ರಹ ಪ್ರತಿಷ್ಠಾಪನಾ ಸಮಾರಂಭದಲ್ಲಿ ಮತ್ತು ನಾಲ್ಕನೇ ಬೆಟ್ಟದ ನಾಮಕರಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ನಂತರ, ಶ್ರೀ ಸಿ.ಪಿ.ರಾಧಾಕೃಷ್ಣನ್ ಅವರು ಸುತ್ತೂರು ಶ್ರೀಕ್ಷೇತ್ರದ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಅಂಗ ಸಂಸ್ಥೆಯಾಗಿರುವ ಮೈಸೂರಿನಲ್ಲಿರುವ ಜೆ.ಎಸ್.ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಹದಿನಾರನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಹಾಗು ಪದವಿ ಪಡೆದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕರ್ನಾಟಕದ ಪ್ರಮುಖ ಮಠಗಳಲ್ಲಿ ಒಂದಾದ ಸುತ್ತೂರು ಮಠದ ಹಳೆಯ ಆವರಣಕ್ಕೂ ಉಪರಾಷ್ಟ್ರಪತಿ ಅವರು ಭೇಟಿ ನೀಡಲಿದ್ದಾರೆ. ಅವರು ಮೈಸೂರಿನ ಬಳಿಯ ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನ ಮತ್ತು ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿರುವ ಚೆಲುವನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.
*****
(Release ID: 2187793)
Visitor Counter : 28