ಪ್ರಧಾನ ಮಂತ್ರಿಯವರ ಕಛೇರಿ
ಉತ್ತರಾಖಂಡ ರಾಜ್ಯದ 25ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ರಾಜ್ಯದ ಜನತೆಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ
Posted On:
09 NOV 2025 9:05AM by PIB Bengaluru
ಉತ್ತರಾಖಂಡ ರಾಜ್ಯ ಸ್ಥಾಪನೆಯ 25ನೇ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡ ಜನತೆಗೆ ಶುಭಾಶಯ ಕೋರಿದ್ದಾರೆ. ಪ್ರಕೃತಿಯ ಮಡಿಲಲ್ಲಿ ನೆಲೆಗೊಂಡಿರುವ ನಮ್ಮ ಈ ದೇವಭೂಮಿ ಇಂದು ಪ್ರವಾಸೋದ್ಯಮದ ಜೊತೆಗೆ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿಯ ಹೊಸ ವೇಗವನ್ನು ಪಡೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ಉತ್ತರಾಖಂಡ ರಾಜ್ಯ ಸ್ಥಾಪನೆಯ 25ನೇ ವಾರ್ಷಿಕೋತ್ಸವದಂದು ರಾಜ್ಯದ ನನ್ನ ಎಲ್ಲಾ ಸಹೋದರ ಸಹೋದರಿಯರಿಗೆ ಶುಭಾಶಯಗಳು. ಪ್ರಕೃತಿಯ ಮಡಿಲಲ್ಲಿ ನೆಲೆಗೊಂಡಿರುವ ನಮ್ಮ ಈ ದೇವಭೂಮಿ ಇಂದು ಪ್ರವಾಸೋದ್ಯಮ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿಯ ಹೊಸ ಆವೇಗವನ್ನು ಪಡೆಯುತ್ತಿದೆ. ರಾಜ್ಯದ ಈ ವಿಶೇಷ ಸಂದರ್ಭದಲ್ಲಿ, ಇಲ್ಲಿನ ವಿನಮ್ರ, ಕಠಿಣ ಪರಿಶ್ರಮಿ ಮತ್ತು ದೇವರಂತಹ ಜನರಿಗೆ ಸುಖ, ಸಂತೋಷ, ಸಮೃದ್ಧಿ, ಅದೃಷ್ಟ ಮತ್ತು ಉತ್ತಮ ಆರೋಗ್ಯವನ್ನು ನಾನು ಬಯಸುತ್ತೇನೆ."
*****
(Release ID: 2188040)
Visitor Counter : 4