ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರು ತಮಿಳುನಾಡಿನ ಚೆನ್ನೈನಲ್ಲಿರುವ ಎಂಜಿಆರ್ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚೆನ್ನೈ-ಕೋಯಮತ್ತೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ ತೋರಿಸಿದರು
प्रविष्टि तिथि:
08 APR 2023 6:16PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಚೆನ್ನೈನಲ್ಲಿರುವ ಎಂಜಿಆರ್ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚೆನ್ನೈ-ಕೋಯಮತ್ತೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ ತೋರಿಸಿದರು. ಸ್ಥಳಕ್ಕೆ ಆಗಮಿಸಿದ ಪ್ರಧಾನಮಂತ್ರಿ ಚೆನ್ನೈ-ಕೋಯಮತ್ತೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಪರಿಶೀಲಿಸಿದರು ಮತ್ತು ಮಕ್ಕಳು ಹಾಗೂ ರೈಲಿನ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ವಂದೇ ಭಾರತ್ ಎಕ್ಸ್‌ಪ್ರೆಸ್‌ನಿಂದಾಗಿ ಚೆನ್ನೈ ಮತ್ತು ಕೋಯಮತ್ತೂರುಗಳ ಸುಂದರ ನಗರಗಳು ಇನ್ನಷ್ಟು ಉತ್ತಮ ಸಂಪರ್ಕವನ್ನು ಪಡೆದುಕೊಂಡಿವೆ. ಈ ಸಂದರ್ಭದಲ್ಲಿ ರೈಲಿಗೆ ಹಸಿರು ನಿಶಾನೆ ತೋರಿಸಿದೆ ಮತ್ತು ಯುವ ಮಿತ್ರರನ್ನು ಸಹ ಭೇಟಿ ಮಾಡಿದೆ."
ಪ್ರಧಾನಮಂತ್ರಿ ಯವರ ಜೊತೆ ತಮಿಳುನಾಡು ರಾಜ್ಯಪಾಲರಾದ ಶ್ರೀ ಆರ್ ಎನ್ ರವಿ, ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಂ ಕೆ ಸ್ಟಾಲಿನ್ ಮತ್ತು ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಇದ್ದರು.
*****
(रिलीज़ आईडी: 2188135)
आगंतुक पटल : 16
इस विज्ञप्ति को इन भाषाओं में पढ़ें:
Malayalam
,
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu