ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜನೌಷಧಿ ಅಡಿಯಲ್ಲಿ ಬಡವರು ದುಬಾರಿ ಔಷಧಿಗಳನ್ನು ಕೈಗೆಟುಕುವ ಬೆಲೆಯಲ್ಲಿ ಪಡೆಯುತ್ತಿರುವುದನ್ನು ನೋಡಲು ತುಂಬಾ ಸಂತೋಷವಾಗುತ್ತದೆ: ಪ್ರಧಾನಮಂತ್ರಿ

Posted On: 08 APR 2023 10:39AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜನೌಷಧಿ ಅಡಿಯಲ್ಲಿ ಬಡವರು ದುಬಾರಿ ಔಷಧಿಗಳನ್ನು ಕೈಗೆಟುಕುವ ಬೆಲೆಯಲ್ಲಿ ಪಡೆಯುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ.

ಕೇಂದ್ರ ರಾಜ್ಯ ಸಚಿವರಾದ ಶ್ರೀ ಸೋಮ್ ಪ್ರಕಾಶ್ ಅವರು ಪ್ರಧಾನಮಂತ್ರಿ ಜನೌಷಧಿ ಪರಿಯೋಜನಾ ಬಡವರಿಗೆ ಕೈಗೆಟುಕುವ ಬೆಲೆಯಲ್ಲಿ ಔಷಧಿಗಳನ್ನು ಪಡೆಯಲು ಹೇಗೆ ಸಹಾಯ ಮಾಡುತ್ತಿದೆ ಎಂಬುದರ ಕುರಿತು ಮಾಡಿದ ಭಾವನಾತ್ಮಕ ಟ್ವೀಟ್ ಪೋಸ್ಟ್‌ಗೆ ಪ್ರತ್ಯುತ್ತರವಾಗಿ, ಪ್ರಧಾನಮಂತ್ರಿ ಅವರು ಹೀಗೆ ಪೋಸ್ಟ್‌ ಮಾಡಿದ್ದಾರೆ:

ಭಾವನಾತ್ಮಕವಾಗಿ ತುಂಬಿದ ಇಂತಹ ಹಲವು ಉದಾಹರಣೆಗಳಿಂದ, ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆಯ ಯಶಸ್ಸು ತಿಳಿದುಬರುತ್ತದೆ. ಇಂದು ದೇಶದಲ್ಲಿ ಬಡವರೂ ಸಹ ದುಬಾರಿ ಔಷಧಿಯನ್ನು ಸುಲಭವಾಗಿ ಖರೀದಿಸಬಹುದು ಎಂಬುದನ್ನು ನೋಡಿ ಬಹಳ ಸಂತೋಷವಾಗುತ್ತದೆ."

 

*****

 


(Release ID: 2188137) Visitor Counter : 8